ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದೊಳಗೆ ವಾಹನಗಳ ಪ್ರವೇಶ ಇಲ್ಲ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಸೆಪ್ಟೆಂಬರ್ 24 : ನಗರದ ಹೈಸ್ಕೂಲ್ ಮೈದಾನದಲ್ಲಿ ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ವಿಜೃಂಭಣೆಯಿಂದ ಆರಂಭವಾಗಿದೆ. ಅದ್ಧೂರಿಯಾಗಿ ನಡೆಯಲಿರುವ ಈ ವಿಸರ್ಜನಾ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ. ಎಲ್ಲೆಡೆ ಗಣೇಶನ ಜಪ ಜೋರಾಗಿದೆ. ಮೆರವಣಿಗೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿರುವ ಕಾರಣ ಟ್ರಾಫಿಕ್ ಜಾಮ್ ಸಹ ಉಂಟಾಗಿದೆ.

ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಮೆರವಣಿಗೆಯಲ್ಲಿ ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ‌. ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ಬಂದೋಬಸ್ತ್‌ಗೆ ಹೆಚ್ಚಿನ ಪೊಲೀಸ್ ನಿಒಯೋಜನೆ ಮಾಡಲಾಗಿದೆ. ಪೊಲೀಸ್ ಪಹರೆ ಎಲ್ಲೆಡೆ ಕಾಯುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ‌.

ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಕಣ್ಣಿಗೆ ಬಟ್ಟೆ ಕಟ್ಟಿ ಚಿತ್ರ ಬಿಡಿಸುವ ವಿಭಿನ್ನ ತರಬೇತಿವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಕಣ್ಣಿಗೆ ಬಟ್ಟೆ ಕಟ್ಟಿ ಚಿತ್ರ ಬಿಡಿಸುವ ವಿಭಿನ್ನ ತರಬೇತಿ

ಮೆರವಣಿಗೆ ಸಂದರ್ಭದಲ್ಲಿ ಹೆಚ್ಚಿನ ಜನ ಸೇರಿರುವ ಕಾರಣ ವಾಹನಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ರಾತ್ರಿ 10 ಗಂಟೆಯವರೆಗೆ ಮಾತ್ರ ದಾವಣಗೆರೆ ನಗರದ ಕೆಎಸ್‍ಆರ್‌ಟಿಸಿ ಮತ್ತು ಖಾಸಗಿ ಬಸ್‍ನಿಲ್ದಾಣಗಳಿಗೆ ಬರುವ ಬಸ್‌ಗಳನ್ನು ನಿಗದಿಪಡಿಸಿದ ಸ್ಥಳಗಳಲ್ಲಿ ನಿಲುಗಡೆ ಮಾಡುವಂತೆ ಆದೇಶಿಸಲಾಗಿದೆ.

Procession of Hindu Mahasabha Ganpati in Davanagere: No Entry of Vehicles Inside the City

ಈ ಕೆಳಕಂಡ ಸ್ಥಳಗಳಲ್ಲಿ ನಿಲುಗಡೆ ಮಾಡಿ ಅಲ್ಲಿಂದಲೇ ವಾಪಸ್ ತೆರಳುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ. ಚನ್ನಗಿರಿ ರಸ್ತೆ ಕಡೆಯಿಂದ ಬರುವ ಬಸ್‍ಗಳು - ಹದಡಿ ರಸ್ತೆಯಲ್ಲಿರುವ ಶ್ರೀ ಮಾಗನೂರು ಬಸಪ್ಪ ಮೈದಾನದಲ್ಲಿ ನಿಲುಗಡೆ ಮಾಡಿಕೊಂಡು ನಿರ್ಗಮಿಸುವುದು. ಜಗಳೂರು ಕಡೆಯಿಂದ ಬರುವ ಬಸ್‍ಗಳು- ಕೆ.ಆರ್.ರಸ್ತೆ ಗಣೇಶಗುಡಿ ಪಕ್ಕದಲ್ಲಿರುವ ಜಗಳೂರು ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡಿ ಹೋಗಬೇಕು.

Procession of Hindu Mahasabha Ganpati in Davanagere: No Entry of Vehicles Inside the City

ಬೆಂಗಳೂರು ಮತ್ತು ಸಂತೆಬೆನ್ನೂರು ಕಡೆಯಿಂದ ಬರುವ ವಾಹನಗಳು, ಬಾಡಾ ಕ್ರಾಸ್‌ನಲ್ಲಿ ನಿಲುಗಡೆ ಮಾಡಿ ವಾಪಸ್ ಹೋಗಬೇಕು. ಹರಿಹರ ಮತ್ತು ಶಾಮನೂರು ಕಡೆಯಿಂದ ಬರುವ ವಾಹನಗಳನ್ನು ದಾವಣಗೆರೆ ನಗರದ ಎಸಿಬಿ ಕಚೇರಿ ಎದುರುಗಡೆ ರಿಂಗ್ ರಸ್ತೆಯಲ್ಲಿರುವ ಎರಡು ಖಾಲಿ ಜಾಗದಲ್ಲಿ ನಿಲುಗಡೆ ಮಾಡಿಕೊಂಡು ನಿರ್ಗಮಿಸಬೇಕೆಂದು ಸೂಚನೆ ನೀಡಲಾಗಿದೆ. ಇನ್ನು ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮೆರವಣಿಗೆಯುದ್ದಕ್ಕೂ ಪೊಲೀಸ್ ಪಹರೆ ಕಾವಲಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

English summary
Procession of Hindu Mahasabha Ganpati started in Davanagere, entry of Vehicles ban inside the City still 10 PM,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X