ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಬಕಾರಿ ಸಚಿವರು ಲಂಬಾಣಿ ಜನಾಂಗದ ಕ್ಷಮೆ ಕೇಳುವಂತೆ ಪ್ರತಿಭಟನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಸೆಪ್ಟೆಂಬರ್ 9: ತಾಂಡಾಗಳಿಗೆ ಸಂಚಾರಿ ಮದ್ಯದಂಗಡಿ ಕಳಿಸುವುದಾಗಿ ಹೇಳಿಕೆ ನೀಡಿದ್ದ ಅಬಕಾರಿ ಸಚಿವ ನಾಗೇಶ್ ವಿರುದ್ಧ ದಾವಣಗೆರೆಯ ಸೇವಾಲಾಲ್ ಯುವಕರ ಸಂಘದ ಸದಸ್ಯರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Recommended Video

ಸಚಿವ ಹೆಚ್ ನಾಗೇಶ್ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಆಲೂರುಹಟ್ಟಿ ಗ್ರಾಮದಲ್ಲಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ಅಬಕಾರಿ ಸಚಿವರು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಅಬಕಾರಿ ಸಚಿವ ನಾಗೇಶ್ ಹೇಳಿಕೆ ವಿರುದ್ಧ ರೇಣುಕಾಚಾರ್ಯ ಅಸಮಾಧಾನಅಬಕಾರಿ ಸಚಿವ ನಾಗೇಶ್ ಹೇಳಿಕೆ ವಿರುದ್ಧ ರೇಣುಕಾಚಾರ್ಯ ಅಸಮಾಧಾನ

ಲಂಬಾಣಿ ತಾಂಡಾಗಳಿಗೆ ಸಂಚಾರಿ ಮದ್ಯದ ಅಂಗಡಿ ಪ್ರಾರಂಭಿಸುವುದಾಗಿ ಅಬಕಾರಿ ಸಚಿವರು ಹೇಳಿಕೆ ನೀಡಿದ್ದರು. ಸಚಿವರ ಈ ಹೇಳಿಕೆಯಿಂದ ಲಂಬಾಣಿಗರ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಲಂಬಾಣಿ ತಾಂಡಾಗಳನ್ನು ಮದ್ಯಮುಕ್ತ ಗ್ರಾಮಗಳನ್ನಾಗಿ ಮಾಡಲು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಆದರೆ ಸಚಿವರು ತಾಂಡದ ಜನರನ್ನು ಮದ್ಯ ವ್ಯಸನಿಗಳನ್ನಾಗಿ ಮಾಡಲು ಹೊರಟಿದ್ದಾರೆ ಎಂದು ದೂರಲಾಗಿದೆ.

Protest In Aluruhatti To Demand Apology From Excise Minister To Lambani Community

ಕೂಡಲೇ ಸಚಿವ ನಾಗೇಶ್ ಅವರು ಲಂಬಾಣಿ ಜನಾಂಗದವರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುತ್ತದೆ ಎಂದೂ ಎಚ್ಚರಿಕೆ ನೀಡಲಾಗಿದೆ.

English summary
The members of Sevalal Youth group protesting against the excise minister who gave a statement that he will start mobile liquar shops for Lambani tandas. They also demanded apology from excise minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X