ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಸಿಗುವವರೆಗೆ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ
ದಾವಣಗೆರೆ, ಅಕ್ಟೋಬರ್, 03: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ನಾವೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ಕೂಡಲಸಂಗಮ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಹೇಳಿದರು.
ನಗರದ ಸದ್ಯೊಜಾತ ಮಠದಲ್ಲಿ ಕರೆಯಲಾಗಿದ್ದ ಜಿಲ್ಲೆಯ ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಪಾದಯಾತ್ರೆ ಮಾಡಿದ್ದೆವು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭರವಸೆ ನೀಡಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಬಸವರಾಜ್ ಬೊಮ್ಮಾಯಿ ಅವರು ಕೊಟ್ಟ ಭರವಸೆ ಈಡೇರಲಿಲ್ಲ ಎಂದರು.

ಆಗ ಸರ್ಕಾರದ ಮಟ್ಟದಲ್ಲಿ ನಮ್ಮವರೂ ಇದ್ದರೂ ಕಾರ್ಯರೂಪಕ್ಕೆ ಬರಲಿಲ್ಲ. ಕೊನೆ ಗಳಿಗೆಯಲ್ಲಿ ಮೀಸಲಾತಿ ಘೋಷಿಸಿದರೂ ಉಪಯೋಗಕ್ಕೆ ಬರಲಿಲ್ಲ. ವಿಧಾನಸಭೆ ಚುನಾವಣೆ ಬಂದ ಕಾರಣ ಬೇಡಿಕೆ ಈಡೇರಲಿಲ್ಲ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ನಮ್ಮ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದರು.
ನಾವು ಸಂಘಟಿತರಾಗಿ ಹೋರಾಟ ಮಾಡಿದರೆ ಮಾತ್ರ ನಮ್ಮ ಹಕ್ಕು ಪಡೆಯಬಹುದು. ಆಗ ರಾಜ್ಯದ ಮೂಲೆ ಮೂಲೆಗಳಿಂದಲೂ ನಮ್ಮ ಹೋರಾಟಕ್ಕೆ ಬೆಂಬಲ ದೊರಕಿತ್ತು. ಈಗ ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದಿದ್ದರೆ ಅನಿವಾರ್ಯವಾಗಿ ಹೋರಾಟಕ್ಕೆ ಇಳಿಯಲೇಬೇಕಾಗುತ್ತದೆ. ಈ ಹಿಂದೆ ನೀಡಿದಂತೆ ಈ ಬಾರಿಯೂ ಬೆಂಬಲಿಸಿ. ನಾವೆಲ್ಲರೂ ಒಟ್ಟಾದರೆ ನಮ್ಮ ಹಕ್ಕು ಪಡೆಯುವುದು ಕಷ್ಟಸಾಧ್ಯವಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
2 ಎ ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲದು. ಕೃಷಿಯನ್ನೇ ಹೆಚ್ಚಾಗಿ ಅವಲಂಬಿಸಿರುವ ಸಮಾಜ ನಮ್ಮದು. ಸಮಾಜಕ್ಕೆ ನ್ಯಾಯ ಸಿಗಲೇಬೇಕು. ಇದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾನು ಸಿದ್ಧನಿದ್ದೇನೆ. ಸಮಾಜಕ್ಕೆ 2 ಎ ಮೀಸಲಾತಿ ದೊರೆತರೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಬಲ ಸಿಗುತ್ತದೆ. ನಮ್ಮ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ನಾವೆಲ್ಲರೂ ಒಟ್ಟಾಗೋಣ, ಮೀಸಲಾತಿ ಪಡೆದೇ ತೀರುತ್ತೇವೆ ಎಂಬ ಶಪಥ ಮಾಡೋಣ ಎಂದು ಶ್ರೀಗಳು ಕರೆ ನೀಡಿದರು.
ದಾವಣಗೆರೆ ಜಿಲ್ಲಾ ಪಂಚಮಸಾಲಿ ಸಮಾಜ ಬಾಂಧವರ ಸಭೆಯಲ್ಲಿ ಸಮಾಜಕ್ಕೆ ಸಿಗಬೇಕಿರುವ ಸೌಲಭ್ಯ, ಮೀಸಲಾತಿ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಸಮಾಜದ ಸಂಘಟನೆ ಮತ್ತು ಆಗಬೇಕಾದ ಕೆಲಸ ಕಾರ್ಯಗಳ ಕುರಿತು ಸಲಹೆ ಸೂಚನೆಗಳನ್ನು ಇದೇ ವೇಳೆ ಪಡೆಯಲಾಯಿತು.
ಸಭೆಯಲ್ಲಿ ಹರಿಹರದ ಮಾಜಿ ಶಾಸಕ ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹೆಚ್. ಎಸ್. ಶಿವಶಂಕರ್, ಕೂಡಲ ಸಂಗಮ ಪೀಠದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಅಜಯ್ ಕುಮಾರ್ ಮತ್ತು ಗೌರವಾಧ್ಯಕ್ಷ ಪರಮೇಶಪ್ಪ ಗೌಡ್ರು ಹೊಳೆಸಿರಿಗೇರೆ, ಜಿಲ್ಲಾಧ್ಯಕ್ಷ ಆರ್.ವಿ.ಅಶೋಕ್ ಗೋಪನಾಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications