PUC Exam 2024: ಮಾರ್ಚ್ 1ರಿಂದ ಪಿಯು ಪರೀಕ್ಷೆ: ಸಿದ್ಧತೆ ಚುರುಕು
ರಾಜ್ಯಾದ್ಯಂತ ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದೇ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಸುಸೂತ್ರ ಪರೀಕ್ಷೆ ನಡೆಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ದಾವಣಗೆರೆ ಜಿಲ್ಲಾಧಿಕಾಗಿ ಡಾ.ಎಂ.ವಿ.ವೆಂಕಟೇಶ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾಲೇಜುಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾರ್ಚ್ 1 ರಿಂದ 22ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರು, ಗಾಳಿ-ಬೆಳಕು ಹಾಗೂ ಆಸನದ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾದ್ಯಂತ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಎಲ್ಲಾ ಪೂರಕ ವಾತಾವರಣ ಕಲ್ಪಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಲ್ಲೂ ಆಸನ, ಗಾಳಿ, ಬೆಳಕು, ಕುಡಿಯುವ ನೀರು ಸೇರಿ ಯಾವುದೇ ಸೌಕರ್ಯಗಳಿಗೆ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು. ಪರೀಕ್ಷಾ ಕೇಂದ್ರದೊಳಗೆ ಕರ್ತನ್ಯ ನಿರತ ಸಿಬ್ಬಂದಿ ಹೊರತುಪಡಿಸಿ ಇತರೆ ಯಾರಿಗೂ ಪ್ರವೇಶವಿರಲ್ಲ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 144 ಸೆಕ್ಷನ್‌ನಡಿ ನಿಷೇದಾಜ್ಞೆ ಜಾರಿಗೊಳಿಸಲಾಗುತ್ತಿದ್ದು ಈ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಾಗದಂತೆ ಪಾರದರ್ಶಕತೆ ರೀತಿಯಲ್ಲಿ ನಡೆಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಶ್ನೆ ಪತ್ರಿಕೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ:
ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮಾತನಾಡಿ, ಖಜಾನೆಗಳಿಂದ ಪ್ರಶ್ನೆಪತ್ರಿಕೆ ಸ್ವೀಕರಿಸಿ, ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕ ನೇಮಿಸಲಾಗುವುದು. ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಸೇರಿ ವಿದ್ಯನ್ಮಾನ ಉಪಕರ ಕಡ್ಡಾಯ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಬೇಕು ಎಮದರು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್ ಬಳ್ಳಾರಿ, ಜಿಲ್ಲಾ ವಿಶೇಷ ವಿಭಾಗದ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ರಾಜಶೇಖರ್, ಡಯಟ್ ಉಪ ನಿರ್ವೇಶಕರಾದ ಗೀತಾ, ಖಜಾನೆ ಇಲಾಖೆ ಉಪ ನಿರ್ದೇಶಕಿ ಪ್ರಭಾವತಿ, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾವತಿ, ಅಸ್ವತ್ಥ ಸೇರಿ ಜಿಲ್ಲೆಯ ಎಲ್ಲಾ ತಾಲೂಕು ತಹಸೀಲ್ದಾರರು, ಕ್ಷೇತ್ರ ಶಿಕ್ಷಕಾಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು ಇದ್ದರು.
ಹರಿಹರ ಬಿಇಒಗೆ ನೋಟೀಸ್ ಜಾರಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಗೆ ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಗೈರು ಆಗಿದ್ದರು. ತಕ್ಷಣವೇ ಹರಿಹರ ಬಿಇಒಗೆ ನೋಟೀಸ್ ಜಾರಿಗೊಳಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಣಾಬು ಬಳ್ಳಾರಿ ಆದೇಶಿದರು.
ಜಿಲ್ಲೆಯ 33 ಕೇಂದ್ರಗಳಲ್ಲಿ ಪರೀಕ್ಷೆ
ದಾವರಣಗೆರೆ ತಾಲೂಕಿನ 18 ಕೇಂದ್ರಗಳು, ಹರಿಹರದ 4, ಜಗಳೂರಿನ 3, ಚನ್ನಗಿರಿಯ 5, ಹೊನ್ನಾವಳಿಯ 3, ಕೇಂದ್ರ ಸೇರಿ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 21,088 ವಿದ್ಯಾರ್ಥಿಗಳು ಈ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.
ಹೊಸ ವಿದ್ಯಾರ್ಥಿಗಳು 19644 ಪುನರಾವರ್ತಿತ ವಿದ್ಯಾರ್ಥಿಗಳು 422 ಮಂದಿ ಇದ್ದಾರೆ. ಖಾಸಗಿ ವಿದ್ಯಾರ್ಥಿಗಳು 1022 ಇದ್ದು ಒಟ್ಟಾರೆ 9980 ಗಂಡು 11,108 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications