ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಗಳೂರು ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 9: ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣ ಪಂಚಾಯತಿಯ ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಕ್ಷದ ಪಾಲಾಗಿದೆ. ಜಗಳೂರು ತಾಲ್ಲೂಕಿನ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು. ಮೀಸಲಾತಿ ಪ್ರಕಟಣೆಗೊಂಡ ಹಿನ್ನೆಲೆಯಲ್ಲಿ ಬಹುಮತ ಪಡೆದಿರುವ ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದರು.

ಜಗಳೂರು ಕ್ಷೇತ್ರದ ಶಾಸಕ ಎಸ್.ವಿ ರಾಮಚಂದ್ರ ಸೂಚನೆಯ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ಆರ್.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಲಲಿತಾ ಶಿವಣ್ಣ ಗದ್ದುಗೆ ಏರಲಿದ್ದಾರೆ.

ದಾವಣಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಹಿಂದೇಟುದಾವಣಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಹಿಂದೇಟು

ಪಟ್ಟಣ ಪಂಚಾಯಿತಿ ಚುನಾವಣೆ ನಡೆದು ಸುಮಾರು ಎರಡು ವರ್ಷ ಕಳೆದ ನಂತರ ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು.

Davanagere: R Tippeswamy Elected As New President Of Jagaluru Town Panchayat

ಈಗಾಗಲೇ ಎರಡರಿಂದ ಮೂರು ಬಾರಿ ಚುನಾವಣೆ ಸಿದ್ಧತೆ ನಡೆಸುತ್ತಿರುವ ವೇಳೆ ತಡೆಯಾಜ್ಞೆ ಆಗುತ್ತಿರುವುದರಿಂದ ಸದಸ್ಯರಲ್ಲಿ ಭಯದ ಮನೆ ವಾತಾವರಣ ಮಾಡಿದ್ದು, ಈ ಬಾರಿ ಪಟ್ಟಣ ಪಂಚಾಯಿತಿಯಲ್ಲಿ 18 ಜನ ಸದಸ್ಯರಿದ್ದು, ಈಗಾಗಲೇ ಬಿಜೆಪಿ ಪಕ್ಷ ಬಹುಮತ ಪಡೆದಿದೆ.

11 ಜನ ಬಿಜೆಪಿ, 5 ಜನ ಕಾಂಗ್ರೆಸ್, 2 ಜನ ಜೆಡಿಎಸ್ ಪಕ್ಷದ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, 5ನೇ ವಾರ್ಡಿನಲ್ಲಿ ಪರಿಶಿಷ್ಟ ವರ್ಗಗಳ ಮೀಸಲಾಗಿದ್ದ ಸ್ಥಾನದಿಂದ ಜಯಗಳಿಸಿ ಸತತ ಮೂರು ಬಾರಿ ಸದಸ್ಯರಾಗಿರುವ (ಎಂಎಲ್ಎ) ಆರ್.ತಿಪ್ಪೇಸ್ವಾಮಿ ಅವರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

17ನೇ ವಾರ್ಡಿನ ಸಾಮಾನ್ಯ ಮಹಿಳೆ ಸ್ಥಾನದಿಂದ ಗೆದ್ದಿರುವ ಟಿ.ಲಲಿತಾ ಶಿವಣ್ಣ ಇವರಿಗೆ ಉಪಾಧ್ಯಕ್ಷ ಸ್ಥಾನ ಒಲಿದಿದ್ದು, ಆದರೆ ಸತತವಾಗಿ ಮೂರು ಬಾರಿ ಸದಸ್ಯರಾಗಿ ಎಸ್.ಟಿ ವರ್ಗದವರು ಆಗಿರುವ, ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರೂ ಆಗಿರುವ ಆರ್.ತಿಪ್ಪೇಸ್ವಾಮಿಗೆ ಕೆಲವು ಸದಸ್ಯರ ಅಸಹಕಾರವಿದ್ದು, ಹಿರಿತನಕ್ಕೆ ಆದ್ಯತೆ ನೀಡಿ ಶಾಸಕರು ಅಧ್ಯಕ್ಷ ಸ್ಥಾನ ನೀಡಿದ್ದಾರೆ.

Recommended Video

BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

ಈ ಎರಡು ಪ್ರಬಲ ಸಮುದಾಯಗಳ ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸುತ್ತಿದ್ದರು. ಹೈಕಮಾಂಡಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ಆದರೆ ಶಾಸಕರಾದ ಎಸ್.ವಿ.ರಾಮಚಂದ್ರ ಅವರು 11 ಜನ ಬಿಜೆಪಿ ಸದಸ್ಯರ ಮನವೊಲಿಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಒಡಂಬಡಿಕೆಯ ಪ್ರಕಾರ ಮಾಡಿ ಮುಗಿಸಿದ್ದಾರೆ.

English summary
R. Thippeswamy has been elected president of the Jagaluru town panchayat in Davanagere district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X