ದಾವಣಗೆರೆ: ರೈಲ್ವೆ ಪೊಲೀಸರ ಜಾಣ್ಮೆಯಿಂದ ತಪ್ಪಿದ ದೊಡ್ಡ ಅನಾಹುತ, ಆ ಸ್ಫೋಟಕ ಸತ್ಯ ಬಯಲಾಗಿದ್ದೇ ರೋಚಕ.!
ದಾವಣಗೆರೆ, ಫೆಬ್ರವರಿ, 09: ಸ್ವಲ್ಪ ಯಾಮಾರಿದ್ದರೂ ಅಪಾಯ ಆಗುತ್ತಿತ್ತು. ರೈಲ್ವೆ ಇಲಾಖೆಯ ಸಿಬ್ಬಂದಿ ಪರಿಶೀಲನೆಯಿಂದ ದುರಂತವೊಂದು ತಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ರೈಲ್ವೆ ಹಳಿಯ ಕ್ಲಾಂಪ್‌ಗಳನ್ನು ಕಳ್ಳತನ ಮಾಡಿದ್ದ ಆರು ಆರೋಪಿಗಳನ್ನು ರೈಲ್ವೆ ಇಲಾಖೆ ಪೊಲೀಸರು ಬಂಧಿಸಿದ್ದಾರೆ. ನಗರದ ಶಾಸ್ತ್ರಿ ಲೇಔಟ್‌ನ ಮಹಮ್ಮದ್ ಸಜ್ಜದ್ (23), ಎಂ.ಡಿ.ಸಾದತ್ (19), ಶಾಂತಿನಗರದ ಎ.ಮೊಹಮ್ಮದ್ ಗೌಸ್ (19), ರಜಾವುಲ್ಲಾ ಮುಸ್ತಫಾ ನಗರದ ಮೊಹಮ್ಮದ್ ಮುಬಾರಕ್ (19), ಮೊಹಮ್ಮದ್ ಹಸೇನ್ (20) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ರೈಲ್ವೆ ಇಲಾಖೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ಲಾಂಪ್‌ಗಳನ್ನು ಕಳವು ಮಾಡಿರುವುದರ ಹಿಂದೆ ದುಷ್ಕೃತ್ಯ ಎಸಗುವ ಉದ್ದೇಶ ಇರುವ ಕುರಿತಂತೆ ಇದುವರೆಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಗುಜರಿ ಅಂಗಡಿಗೆ ಕಬ್ಬಿಣ ಮಾರಾಟ ಮಾಡಿ ಹಣ ಗಳಿಸುವ ಉದ್ದೇಶದಿಂದ ಕಳವು ಮಾಡಿದ್ದು, ಕೆಲ ಆರೋಪಿಗಳಿಗೆ ಗುಜರಿ ನಂಟಿರುವ ಕುರಿತಂತೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಆರ್‌ಪಿಎಫ್ ಇನ್ಸ್‌ಪೆಕ್ಟರ್ ಬಿ.ಎನ್.ಕುಬೇರಪ್ಪ ಮಾರ್ಗದರ್ಶನದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಆರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ ಏನು?: ಕಳೆದ ಫೆಬ್ರವರಿ 1ರಂದು ರಾತ್ರಿ ರೈಲ್ವೆ ಹಳಿಯ ಕ್ಲಾಂಪ್‌ಗಳು ಕಳವಾಗಿದ್ದವು. ದಾವಣಗೆರೆ-ತೋಳಹುಣಸೆ ರೈಲ್ವೆ ನಿಲ್ದಾಣದ ನಡುವೆ ಬರುವ ಎಸ್.ಎಸ್.ಹೈಟೆಕ್ ಆಸ್ಪತ್ರೆ ಬಳಿಯ ರೈಲ್ವೆ ಹಳಿಗಳಿಗೆ ಅಳವಡಿಕೆ ಮಾಡಲಾಗಿದ್ದ 178 ಕ್ಲಾಂಪ್‌ಗಳನ್ನು ಸುತ್ತಿಗೆಯನ್ನು ಬಳಸಿ ಕಳ್ಳರು ಕದ್ದೊಯ್ದಿದ್ದರು. ಅಂದು ಬೆಳಗ್ಗೆ ರೈಲ್ವೆ ಇಲಾಖೆಯ ಸಿಬ್ಬಂದಿ ಬೆಳಗ್ಗೆ ಗಮನಿಸಿ ಎಚ್ಚೆತ್ತುಕೊಂಡಿದ್ದರಿಂದ ಆಗಬಹುದಾಗಿದ್ದ ಅನಾಹುತವೊಂದು ತಪ್ಪಿದಂತಾಗಿದೆ.
ಕ್ಲಾಂಪ್‌ಗಳನ್ನು ರೈಲ್ವೆ ಹಳಿಗಳ ಹಿಡಿತಕ್ಕೋಸ್ಕರ ಹಳಿಗಳ ಮಧ್ಯೆದಲ್ಲಿ ಒಂದೂವರೆ ಅಡಿಗೆ ಒದರಂತೆ ಅಳವಡಿಕೆ ಮಾಡಲಾಗುತ್ತದೆ. ಒಂದು ಕ್ಲಾಂಪ್ ಮುಕ್ಕಾಲು ಕೆ.ಜಿ. ತೂಕ ಬರುತ್ತದೆ. ಕಳವು ಮಾಡಿಕೊಂಡು ಹೋದ ಸಮಯದಿಂದ ಬೆಳಗ್ಗೆಯವರೆಗೆ ಸುಮಾರು ನಾಲ್ಕರಿಂದ ಐದು ರೈಲುಗಳು ಓಡಾಟ ನಡೆಸಿವೆ. ಒಂದು ಬಿಟ್ಟು ಮತ್ತೊಂದು ರೀತಿಯಲ್ಲಿ ಕ್ಲಾಂಪ್‌ಗಳನ್ನು ಕಳ್ಳರು ಕಳ್ಳತನ ಮಾಡಿರುವುದರಿಂದ ಅಪಾಯ ಆಗಿಲ್ಲ.
ಸರಣಿ ರೀತಿಯಲ್ಲಿ 170 ಕ್ಲಾಂಪ್‌ಗಳನ್ನು ಬಿಚ್ಚಿಕೊಂಡು ಹೋಗಿದ್ದರೆ ರೈಲುಗಳ ವೇಗಕ್ಕೆ ಹಳಿಗಳು ತಡೆದುಕೊಳ್ಳದೇ ಅಪಘಾತ ಆಗುವ ಸಾಧ್ಯತೆ ಹೆಚ್ಚಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications