• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ; ತಗ್ಗದ ಪ್ರವಾಹ, ರೈತರಿಗೆ ಸಂಕಷ್ಟ ತಂದ ವರುಣ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ 20: ದಾವಣಗೆರೆ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಗೆ 10 ಕೋಟಿ ರುಪಾಯಿಗೂ ಅಧಿಕ ನಷ್ಟ ಸಂಭವಿಸಿದೆ. 10 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ಇನ್ನು ಮಳೆ ಮುಂದುವರಿದಿರುವ ಕಾರಣ ನಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಹಲವು ಕಡೆ ಸೇತುವೆಗಳು ಕುಸಿದು ಬಿದ್ದಿದ್ದು, ವಾಹನ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ರಸ್ತೆ ಮೇಲೆಲ್ಲಾ ನೀರು ನಿಂತಿದ್ದು, ಜನರ ಓಡಾಟಕ್ಕೂ ತೊಂದರೆ ಆಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಕೆಲ ಗ್ರಾಮೀಣ ಭಾಗದ ಶಾಲೆಗಳ ಆವರಣಗಳು ಜಲಾವೃತಗೊಂಡಿವೆ.

ದಾವಣಗೆರೆ: ಭಾರಿ ಗಾಳಿ ಮಳೆಗೆ ಸಾವಿರಾರು ಎಕರೆ ಭತ್ತ ನಾಶ, ಕಂಗಾಲಾದ ರೈತ ದಾವಣಗೆರೆ: ಭಾರಿ ಗಾಳಿ ಮಳೆಗೆ ಸಾವಿರಾರು ಎಕರೆ ಭತ್ತ ನಾಶ, ಕಂಗಾಲಾದ ರೈತ

ಹೊನ್ನಾಳಿ, ನ್ಯಾಮತಿ ತಾಲೂಕಿನ ಜನರು ಮಳೆ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಮಳೆಹಾನಿ ಪ್ರದೇಶಗಳಿಗೆ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು‌. ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕುಂದೂರು, ಕೂಲಂಬಿ ಮುಕ್ತೇನಹಳ್ಳಿ, ಯರೇ ಚಿಕ್ಕನಹಳ್ಳಿ, ಬನ್ನಿಕೋಡು, ಕೆಂಗಲಹಳ್ಳಿ, ತಿಮ್ಮೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದರು.

ದಾವಣಗೆರೆ; ಅನ್ನದಾತರ ಬದುಕಲ್ಲಿ ಬಿರುಗಾಳಿ ಎಬ್ಬಿಸಿದ ಮಳೆ!ದಾವಣಗೆರೆ; ಅನ್ನದಾತರ ಬದುಕಲ್ಲಿ ಬಿರುಗಾಳಿ ಎಬ್ಬಿಸಿದ ಮಳೆ!

ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ 2000ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ‌. ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದ ರೇಣುಕಾಚಾರ್ಯ ಅವರಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದರು‌. ಬೆಳೆ ಹಾಗೂ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ರೇಣುಕಾಚಾರ್ಯ ಭರವಸೆ ನೀಡಿದರು.

ದಾವಣಗೆರೆ: ಭಾರಿ ಮಳೆ, ಗಾಳಿಗೆ 300 ಅಡಿಕೆ ಮರಗಳು ನೆಲಸಮದಾವಣಗೆರೆ: ಭಾರಿ ಮಳೆ, ಗಾಳಿಗೆ 300 ಅಡಿಕೆ ಮರಗಳು ನೆಲಸಮ

ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಎಡೆಬಿಡದೆ ಸುರಿದ ಮಳೆಗೆ ಸುಮಾರು 6 ಕೋಟಿ 94 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 65 ಮಿ.ಮೀ. ಸರಾಸರಿ ಮಳೆಯಾಗಿದೆ. ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆ ತೀವ್ರ ಹಾನಿಯಾಗಿದ್ದು, ರ 29 ಕಚ್ಚಾಮನೆ ಭಾಗಶ: ಹಾನಿಯಾಗಿದೆ. ರೂ. 7.30 ಲಕ್ಷ, 563 ಎಕರೆ ಭತ್ತದ ಬೆಳೆ, 4 ಎಕರೆ ಬದನೆ ಬೆಳೆ, 1 ಎಕರೆ ಸೌತೆಕಾಯಿ ಬೆಳೆ ಹಾನಿಯಾಗಿದ್ದು, ರೂ. 169.40 ಲಕ್ಷ, ಒಟ್ಟು ರೂ. 178.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 4 ಲಕ್ಷ, 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2 ಲಕ್ಷ, 15 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 24.00 ಲಕ್ಷ, 4000 ಎಕರೆ ಭತ್ತದ ಬೆಳೆ, 30 ಎಕರೆ ಎಲೆಬಳ್ಳಿ, 60 ಅಡಿಕೆ ಮರ ಹಾನಿಯಾಗಿದ್ದು, ರೂ. 260.00 ಲಕ್ಷ, 1 ಜಾನುವಾರು ಮೃತಪಟ್ಟಿದೆ‌.

paddy

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಕಚ್ಚಾ ಮನೆ ಭಾಗಶ ಹಾನಿಯಾಗಿದ್ದು, ರೂ. 1.90 ಲಕ್ಷ ಮತ್ತು 16.20 ಎಕರೆ ಈರುಳ್ಳಿ, ಭತ್ತ ಮತ್ತು ರಾಗಿ ಬೆಳೆ ಹಾನಿಯಾಗಿದ್ದು, ರೂ. 8.30 ಲಕ್ಷ ಒಟ್ಟು 10.20 ಲಕ್ಷ ಅಂದಾಜು ನಷ್ಟ ಸಂಭವಿಸಿದೆ‌. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 6 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.3.60 ಲಕ್ಷ, 26 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 13 ಲಕ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ನೀರು ತುಂಬಿ, ಅಪಾರ ಹಾನಿಯುಂಟಾಗಿದೆ. ಇಂದು ಅಧಿಕಾರಿಗಳೊಂದಿಗೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ವೀಕ್ಷಣೆ ಮಾಡಿ, ರೈತರಿಗೆ ಕೃಷಿ ಸಚಿವ ಬಿ. ಸಿ. ಪಾಟೀಲ್ ಧೈರ್ಯ ತುಂಬಿದರು.

ಅಪಾರ ಪ್ರಮಾಣದ ಮಳೆಯಿಂದ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆ ಸುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಇದರಿಂದ ಅಡಿಕೆ, ಬಾಳೆ ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ, ಹಲವೆಡೆ ಬೆಳೆ ಹಾನಿ ಸಂಭವಿಸಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮೊಂದಿಗೆ ಇದೆ. ಈಗಾಗಲೇ ಅಧಿಕಾರಿಗಳಿಗೆ ಮಾಹಿತಿ ಪಡೆಯಲು ನಿರ್ದೇಶನ ನೀಡಿದ್ದೇನೆ. ಮಾಹಿತಿ ಬಂದ ನಂತರ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಬಿ.ಪಿ ಹರೀಶ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಹರಿಹರ ತಾಲೂಕು ರಾಮತೀರ್ಥ ಗ್ರಾಮದಲ್ಲಿ ಧಾರಾಕಾರ ಮಳೆಯಿಂದಾಗಿ ಸೂಳೆಕೆರೆ ಕೆರೆ ತುಂಬಿ ಕೋಡಿ ಬಿದ್ದಿದೆ. ಹಳ್ಳ ತುಂಬಿ ಹರಿದ ಪರಿಣಾಮ ಬಾಳೆ, ಭತ್ತ ಸೇರಿದಂತೆ ಹಲವು ಬೆಳೆ ಹಾನಿಯಾಗಿದೆ. ಬೆಳ್ಳೂಡಿ ಮತ್ತು ರಾಮತೀರ್ಥ ಗ್ರಾಮದ ದಾರಿ ಸ್ಥಗಿತವಾಗಿದೆ. ಜನರು ಪರದಾಡುವಂತಾಗಿದೆ.

English summary
Heavy rain continued in various taluks of the Davanagere district. Farmers in trouble after crop damaged due to rain fall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X