ಫೆ. 8,9 ರಂದು ರಾಜನಹಳ್ಳಿ ವಾಲ್ಮೀಕಿ ಜಾತ್ರೆ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಫೆ.8 ಹಾಗೂ 9ರಂದು ಎರಡು ದಿನಗಳ ಕಾಲ ನಡೆಯುವ ಶ್ರೀವಾಲ್ಮೀಕಿ ಜಾತ್ರಾ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ದಾವಣಗೆರೆ, ಫೆಬ್ರವರಿ 7: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಫೆ.8 ಹಾಗೂ 9 ರಂದು ಎರಡು ದಿನಗಳ ಕಾಲ ನಡೆಯುವ ಶ್ರೀ ವಾಲ್ಮೀಕಿ ಜಾತ್ರಾ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ವಾಲ್ಮೀಕಿ ಜಾತ್ರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ವ್ಯವಸ್ಥಿತವಾಗಿ ಆಯೋಜನೆಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಕ್ರಿಯವಾಗಿ ಸಹಕಾರ ನೀಡುವಂತೆ ಜಾತ್ರಾ ಸಮಿತಿಯ ಅಧ್ಯಕ್ಷ ಎಸ್. ವಿ. ರಾಮಚಂದ್ರ ಮನವಿ ಮಾಡಿದ್ದಾರೆ. ಹರಿಹರ ತಾಲೂಕಿನ ವಾಲ್ಮೀಕಿ ಶ್ರೀಮಠದ ಸಭಾಂಗಣದಲ್ಲಿ ವಾಲ್ಮೀಕಿ ಜಾತ್ರಾ ಪೂರ್ವ ಸಿದ್ಧ ಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ನಡೆಯುವ ಜಾತ್ರೆ ವಿಶೇಷವಾಗಿದೆ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳದ ಹಿನ್ನಲೆಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಜನಸಂಖ್ಯೆ ಹೆಚ್ಚು ಸೇರಿಲಿದೆ. ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಾಗಿ ಜಾತ್ರೆ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮಾತಾನಾಡಿ, "ಶ್ರೀ ವಾಲ್ಮೀಕಿ ಮಠದಿಂದ ರಥೋತ್ಸವ ಹಾಗೂ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಅತ್ಯಂತ ಶಿಸ್ತಿನಿಂದ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ ಜಾತ್ರೆಗೆ ಹೆಚ್ಚು ಜನರು ಸೇರುವ ನಿರೀಕ್ಷೆ ಇರುವುದರಿಂದ ಯಾವುದೇ ಸಮಸ್ಯೆಯಾಗದಂತೆ ವಿವಿಧ ಇಲಾಖಾ ಅಧಿಕಾರಿಗಳು ಪೂರ್ವ ಸಿದ್ದತೆ ಕೈಗೊಂಡು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಿಂದ ರಾಜನಹಳ್ಳಿಗೆ ಪ್ರವೇಶ ಮಾಡುವ ಮಾರ್ಗದ ಅಗತ್ಯ ರಸ್ತೆ ದುರಸ್ತಿ , ಕುಡಿಯುವ ನೀರಿನ ವ್ಯವಸ್ಥೆಗೆ ಟ್ಯಾಂಕರ್ ಗಳ ನಿಯೋಜನೆ ಆ್ಯಂಬುಲೆನ್ಸ್ ಹಾಗೂ ವೈದ್ಯಕೀಯ ತಂಡಗಳ ನಿಯೋಜನೆ ಹಾಗೂ ಅಗ್ನಿಶಾಮಕ ವಾಹನ ನಿಯೋಜನೆ ಸೇರಿದಂತೆ ಅಗತ್ಯ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಸೂಚಿಸಿದರು.
ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಎಂ.ಸಿ ಅಂಡ್ ಎ ಸಂಸ್ಥೆಗೆ ವಹಿಸಲಾಗುವುದು. ಹಾಗೂ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸುವರಿಂದ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಎರಡು ದಿನ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು ಸ್ವಚ್ಚತೆ ಮತ್ತು ಕಸ ವಿಲೇವಾರಿಗೆ ಹರಿಹರ ನಗರಸಭೆ ಹಾಗೂ ರಾಜನಹಳ್ಳಿ ಗ್ರಾಮ ಪಂಚಾಯಿತಿ ಜಂಟಿಯಾಗಿ ಕಾರ್ಯನಿರ್ವಹಣೆ ಮಾಡಿ ಹೆಚ್ಚುವರಿಗೆ ಸಕ್ಕಿಂಗ್ ಮಿಷನ್ ಬಳಕೆ ವಾಹನಗಳ ಮೂಲಕ ಕಸ ವಿಲೇವಾರಿಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೆಲಿಪ್ಯಾಡ್ ವ್ಯವಸ್ಥೆ ಸೇರಿದಂತೆ ಬ್ಯಾರಿಕೇಡಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಿಯೂ ಗೊಂದಲ ಆಗದಂತೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯಬೇಕು. ಜಾತ್ರಾ ಸಂದರ್ಭವನ್ನು ಬಳಸಿಕೊಂಡು ಸರ್ಕಾರದ ವಿವಿಧ ಯೋಜನೆಗಳ ಜಾಗೃತಿಗಾಗಿ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಬೇಕು. ಹಾಗೂ ಇದೇ ಸಂದರ್ಭದಲ್ಲಿ ಉದ್ಯೋಗ ಮೇಳ ಆಯೋಜಿಸುವಂತೆ ಕೈಗಾರಿಕೆ ಇಲಾಖೆಯ ಜಂಟಿನಿರ್ದೇಶಕರಿಗೆ ತಿಳಿಸಿದರು.

ಈ ವೇಳೆ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರು ಮಾತಾನಾಡಿ, ಜಾತ್ರಾ ಮಹೋತ್ಸವಕ್ಕೆ ಎರಡು ದಿನ ಮಾತ್ರ ಬಾಕಿ ಇದೆ. ಸಿದ್ದತೆಗಳಲ್ಲಿ ಗಂಭೀರವಾಗಿ ತೊಡಗಿಸಿಕೊಂಡು ಯಾವುದೇ ಲೋಪವಾಗದಂತೆ ಗೊಂದಲವಾಗದಂತೆ ವ್ಯವಸ್ಥೆ ಮಾಡಬೇಕು. ಹೆಲಿಪ್ಯಾಡ್ ಸಿದ್ದತೆ ಹೆಚ್ಚು ಜನಸಂದಣಿ ಇರುವುದರಿಂದ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್ ವ್ಯವಸ್ಥೆ ವಿದ್ಯುತ್ ದೀಪಗಳ ವ್ಯವಸ್ಥೆ ಸಂಪರ್ಕ ರಸ್ತೆಗಳ ದುರಸ್ತಿ ಹಾಗೂ ಮಾರ್ಕಿಂಗ್ ಗಣ್ಯರು ಅತಿಗಣ್ಯರು ಪ್ರವೇಶಕ್ಕೆ ಪ್ರತ್ಯೇಕ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಪ್ರವೇಶದ್ವಾರ ಹಾಗೂ ನಿರ್ಗಮನ ದ್ವಾರ ಪಾರ್ಕಿಂಗ್ ವ್ಯವಸ್ಥೆಯನ್ನು ಕುರಿತಂತೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ವಾಲ್ಮೀಕಿ ಮಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತದೆ. ವಾಲ್ಮೀಕಿ ಜಾತ್ರೆ ವೈಚಾರಿಕ ಜಾತ್ರಾ ಆಗಿದೆ. ಕೊವೀಡ್ ಕಾರಣಕ್ಕಾಗಿ ಕಳೆದ ವರ್ಷ ಸರಳವಾಗಿ ಜಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ವರ್ಷ ವಿಶೇಷವಾಗಿ ಜಾತ್ರೆ ಆಯೋಜನೆ ಮಾಡಲಾಗಿದೆ ಜಾತ್ರೆಗೆ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಜಾತ್ರೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಡಳಿತ ಸಹಕಾರ ಅವಶ್ಯಕ ಎಂದು ಹೇಳಿದರು.
ಫೆಬ್ರವರಿ 8ರಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಶ್ರೀಮಹರ್ಷಿ ವಾಲ್ಮೀಕಿ ಧ್ವಜಾರೋಹಣ, ಮಹಿಳಾ ಗೋಷ್ಠಿ, ಉದ್ಯೋಗ ಮೇಳ, ರೈತ ಗೋಷ್ಠಿ, ಬುಡಕಟ್ಟು ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ಜರುಗಲಿವೆ. ಫೆಬ್ರವರಿ 9ರಂದು ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಸ್ವಚ್ಛತಾ ಕಾರ್ಯಕ್ರಮ ನೂತನ ವಾಲ್ಮೀಕಿ ರಥ ಲೋಕಾರ್ಪಣೆ ಧರ್ಮಸಭೆ, ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಫೆಬ್ರವರಿ 8ರಂದು ಮೊದಲ ದಿನ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಸಾರಿಗೆ ಸಚಿವ ಬಿ.ಶ್ರೀರಾಮುಲು ಸೇರಿದಂತೆ ವಿವಿಧ ಗಣ್ಯರು, ಸಾಹಿತಿಗಳು ಚಿಂತಕರು ಭಾಗವಹಿಸಲಿದ್ದಾರೆ ಎಂದರು.
ಫೆಬ್ರವರಿ 9ರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವರಾದ ಶ್ರೀರಾಮುಲು, ಆರ್.ಅಶೋಕ, ಬೈರತಿ ಬಸವರಾಜ, ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications