Ration: ಹರಿಹರ ತಾಲ್ಲೂಕಿನ ಕುಂಬಳೂರು ಸಮೀಪ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ಚೀಲಗಳ ವಶ
Ration: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ಕುಂಬಳೂರು ಸಮೀಪ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಹಾರ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ಜಂಟಿಯಾಗಿ ದಾಳಿ ನಡೆಸಿ 176 ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯರ ಮಾಹಿತಿ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯಲ್ಲಿ ಜಮೀನಿನಲ್ಲಿದ್ದ ಮಳಿಗೆಯೊಂದರಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಈ ಜಮೀನು ಇನಾಯತ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯ ಮೌಲ್ಯವನ್ನು ಸುಮಾರು ₹1.80 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಅಕ್ಕಿ ಹೇಗೆ ಸಂಗ್ರಹಿಸಲಾಯಿತು ಹಾಗೂ ಇದರ ಹಿಂದೆ ಯಾರ್ಯಾರು ಇದ್ದಾರೆ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಶಿವಕುಮಾರ್, ಪಿಎಸ್‌ಐ ಹಾರೂನ್ ಅಖ್ತರ್, ಶ್ರೀಪತಿ ಜಿ. ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಈ ಕುರಿತು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಡಿತರ ಚೀಟಿ ತಿದ್ದುಪಡಿ ಕುರಿತು ಮಾಹಿತಿ
ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಬಯಸುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್‌ಲೈನ್ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ.
ಪಡಿತರ ಚೀಟಿಯಲ್ಲಿ ಏನಲ್ಲಾ ತಿದ್ದುಪಡಿ ಮಾಡಿಸಬಹುದು?
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಪಡಿತರ ಚೀಟಿ ವಿಳಾಸ ಬದಲಾವಣೆ
* ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿ ಬದಲಾವಣೆ
* ಕುಟುಂಬದ ಹೊಸ ಸದಸ್ಯರ ಸೇರ್ಪಡೆ
* ರೇಷನ್ ಕಾರ್ಡ್‌ನಿಂದ ಸದಸ್ಯರ ತೆಗೆದು ಹಾಕುವುದು
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಈ ಕೆವೈಸಿ ಮಾಡಲು ಅವಕಾಶ
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
* ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇತರ ಬದಲಾವಣೆಗೆ ಮಾಡಿಸಬಹುದಾಗಿದೆ
ಹೊಸ ಸದಸ್ಯರ ಸೇರ್ಪಡೆ ಹೇಗೆ?
* ಅಧಿಕೃತ ವೆಬ್‌ಸೈಟ್ https://ahara.karnataka.gov.in/ ಭೇಟಿ ನೀಡಿ.
* ಪಬ್ಲಿಕ್ ಯೂಸ್ ಎಂಬ ಮೆನು ಬಾರ್ ಕೆಳಗೆ ಜಿಲ್ಲಾವಾರು ಮಾಹಿತಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿ ಅಯ್ಕೆ ವಿಭಾಗಗಳು ಇವೆ.
* ಹೊಸ ರೇಷನ್ ಕಾರ್ಡ್ ಬೇಕಾದರೆ ಅಪ್ಲೈ ಫಾರ್ ನ್ಯೂ ರೇಷನ್ ಕಾರ್ಡ್ ಮತ್ತು ಪಡಿತರ ಚೀಟಿ ತಿದ್ದುಪಡಿಗಾದರೆ ಅಪ್ಲೈ ಫಾರ್ ರೇಷನ್ ಕಾರ್ಡ್ ಕರೆಕ್ಷನ್ಸ್ ಆಯ್ಕೆ ಸೆಲೆಕ್ಟ್ ಮಾಡಬೇಕಾಗುತ್ತದೆ.
* ಹೊಸ ಪೇಜ್‌ನಲ್ಲಿ ಕಾಣಸುವ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ.
* ನಂತರ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಬೇಕು.
* ಪರಿಷ್ಕೃತ ಪಡಿತರ ಚೀಟಿ, ಹೊಸ ಪಡಿತರ ಚೀಟಿ ವಿತರಣೆ ಆಗುತ್ತದೆ.
ಯಾರೆಲ್ಲಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು?
ಕರ್ನಾಟಕದ ರಾಜ್ಯದ ಕಾಯಂ ನಿವಾಸಿಗಳು ಮಾತ್ರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಮಾತ್ರವಲ್ಲದೆ, ಕರ್ನಾಟಕ ರಾಜ್ಯದ ನಾಗರಿಕರು ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು ಇ-ಪಡಿತರ ಚೀಟಿಯನ್ನು ಡೌನ್‌ಲೋಡ್ ಮಾಡಬಹುದು. ಇ-ಪಡಿತರ ಚೀಟಿಯನ್ನೇ ಬಳಕೆ ಮಾಡಬಹುದು. ಅರ್ಜಿದಾರರು ತಮ್ಮ ಮೂಲ ಪಡಿತರ ಚೀಟಿಯನ್ನು ಎಲ್ಲೆಡೆ ಕೊಂಡೊಯ್ಯಬೇಕಾಗಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ.












Click it and Unblock the Notifications