Get Updates
Get notified of breaking news, exclusive insights, and must-see stories!

ಅನ್ನಭಾಗ್ಯ ಯೋಜನೆಯ ಪಡಿತರ ದುರ್ಬಳಕೆ ತಡೆಗೆ ಕಟ್ಟುನಿಟ್ಟಿನ ಕ್ರಮ

Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಈ ನಡುವೇಯೇ ಇದೀಗ ಅನ್ನಭಾಗ್ಯ ಯೊಜನೆ ಪಡಿತರ ಅಕ್ರಮ ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ದಾವಣಗೆರೆ ಜಿಲ್ಲಾಧಿಕಾರಿ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ ಆಹಾರ ಇಲಾಖೆಯು ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮುಂದುವರೆಸಿದೆ. ಬಡವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ಸಿಗುವಂತೆ ಮಾಡುವುದೇ ಈ ಮಹತ್ವದ ಕಾರ್ಯದ ಉದ್ದೇಶವಾಗಿದೆ. ಈ ನಡುವೆಯೇ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಪಡಿತರವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸೂಕ್ತ ಕ್ರಮ ಜರುಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

Ration Davanagere DC Cracks Down on Illegal Sale of Anna Bhagya Scheme Rice

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಿಸಲು ಪ್ರಮುಖ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳೊಂದಿಗೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಕುರಿತು ಸಭೆ ಆಯೋಜನೆ ಮಾಡಲಾಗುತ್ತಿ. ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾಧಿಕಾರಿಗಳು, ಮಧ್ಯವರ್ತಿಗಳು ಹಣದ ಆಮಿಷವೊಡ್ಡಿ ಬಡವರಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚಿಸಿದರು.

ಮನಗಳಿಗೆ ಹೋಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಂಗ್ರಹಿಸಿ ಅದನ್ನು ರಾಜ್ಯದ ಗಡಿಯಾಚೆಗೆ ಮಾರಾಟ ಮಾಡತ್ತಿರುವ ಆರೋಪ ಕೇಳಿಬಂದಿದೆ. ಅದರಲ್ಲೂ ನ್ಯಾಮತಿ ತಾಲ್ಲೂಕುಗಳಲ್ಲಿ ಅತೀ ಹೆಚ್ಚಾಗಿ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯೂ ಕಾಳಸಂತೆಯಲ್ಲಿ ಮಾರಾಟ ಆಗುತ್ತಿದೆ. ಬಳಿಕ ಅದನ್ನು ಹೊರ ದೇಶಗಳಿಗೆ ಕಳುಹಿಸಲಾಗುತ್ತಿದೆ. ಗಂಜಿ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ. ಅದ್ದರಿಂದ ಇದನ್ನು ತಡೆಗಟ್ಟಲು ನಗರದ ಪ್ರಮುಖ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದನ್ನು ಅರ್ಹರಲ್ಲದವರು ಕೂಡ ಕಡಿಮೆ ಬೆಲೆಗೆ ಖರೀದಿ ಮಾಡಿ ಹೊರ ಜಿಲ್ಲೆಗಳಿಗೆ ಸಾಗಿಸುತ್ತಿದ್ದಾರೆ. ಬಡವರಿಗೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ವ್ಯವಸ್ಥಿತವಾಗಿ ರೈಸ್ ಮಿಲ್‍ಗಳ ಗೋಡೌನ್ ಸೇರುತ್ತಿದೆ. ಈ ಮೂಲಕ ಬಡವರ ಹೊಟ್ಟೆಗೆ ಕಲ್ಲು ಹಾಕುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ದಾವಣಗೆರೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್‌ ಕಾರ್ಡ್‌ ದುರ್ಬಳಕೆ ಮಾಡುವವರು ಒಂದು ಕಡೆಯಾದ್ರೆ, ಮತ್ತೊಂದೆಡೆ ಇನ್ನೂ ಕೆಲವರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ದೊಡ್ಡಿಗೆ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಅಲ್ಲದೆ, ಜಿಲ್ಲಾ ಮಟ್ಟದಲ್ಲೂ ಕೂಡ ಆಯಾ ಜಿಲ್ಲಾಧಿಕರಿಗಳು ಸಹ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಈಗಾಗಲೇ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ಸಹ ರದ್ದುಪಡಿಸಿ, ಎಪಿಎಲ್‌ಗೆ ವರ್ಗಾಹಿಸುವ ಮಹತ್ವದ ಕಾರ್ಯಾಚರಣೆ ಚಾಲ್ತಿಯಲ್ಲಿದೆ. ಮತ್ತೆ ಕೆಲವು ಅನರ್ಹರ ವಿರುದ್ಧ ದಂಡಾಸ್ತ್ರದ ಪ್ರಯೋಗ ಮಾಡಲು ಕೂಡ ಸರ್ಕಾರ ನಿರ್ಧರಿಸಿದೆ ಅಂತಲೂ ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+