Ration: ಅಕ್ರಮವಾಗಿ ಸಾಗಿಸುತ್ತಿದ್ದ 300 ಚೀಲ ಪಡಿತರ ಅಕ್ಕಿ ಜಪ್ತಿ: ಜಗಳೂರು ಪೊಲೀಸರಿಂದ ಭರ್ಜರಿ ಬೇಟೆ

ಜಗಳೂರು, ಜುಲೈ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 300 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಟೋಲ್ ಪ್ಲಾಜಾ ಬಳಿ ಈ ಕಾರ್ಯಾಚರಣೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಮೂಲಕ ಲಾರಿಯೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿ ಶಿವಪ್ರಕಾಶ್, ಎಪಿಎಂಸಿ ಅಧಿಕಾರಿ ಮನು ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಸಿದ್ರಾಮಯ್ಯ ಅವರ ನೇತೃತ್ವದಲ್ಲಿ ವಿಶೇಷ ಜಂಟಿ ತಂಡವನ್ನು ರಚಿಸಿ ಈ ಕಾರ್ಯಾಚರಣೆ ಮಾಡಲಾಗಿದೆ.

Ration Rice Seized in National highway Jagaluru Toll Plaza Haryana Marked Stock Raises Suspicion

ಅಕ್ರಮ ಪಡಿತರ ಸಾಗಾಟದ ಲಾರಿ ವಶ

ಟೋಲ್ ಬಳಿ ಕಾದು ಕುಳಿತಿದ್ದ ಅಧಿಕಾರಿಗಳ ತಂಡ ಬೆಳಗ್ಗೆ ಹೆದ್ದಾರಿಯಲ್ಲಿ ಸಂಶಯಾಸ್ಪದವಾಗಿ ಚಲಿಸುತ್ತಿದ್ದ ಕ್ಯಾಂಟರ್ ಲಾರಿಯನ್ನು ತಡೆದು ತಪಾಸಣೆ ನಡೆಸಿದೆ. ಈ ವೇಳೆ ಲಾರಿಯೊಳಗೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲದ 300 ಚೀಲ ಪಡಿತರ ಅಕ್ಕಿ ಪತ್ತೆಯಾಗಿವೆ. ಆಗ ತಕ್ಷಣವೇ ಅಧಿಕಾರಿಗಳು ಲಾರಿ ಸಮೇತ ಅಕ್ಕಿ ಜೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಚೀಲಗಳ ಮೇಲೆ ಹರಿಯಾಣ ಸರ್ಕಾರದ ಹೆಸರು

ವಶಪಡಿಸಿಕೊಳ್ಳಲಾದ ಪಡಿತರ ಅಕ್ಕಿ ತುಂಬಿದ ಚೀಲಗಳ ಮೇಲೆ 'ಗವರ್ನಮೆಂಟ್ ಆಫ್ ಹರಿಯಾಣ' ಎಂದು ಮುದ್ರಿತವಾಗಿರುವುದು ಅಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿದೆ. ಬೇರೆ ರಾಜ್ಯದ ಪಡಿತರ ಅಕ್ಕಿಯನ್ನು ಇಲ್ಲಿಗೆ ತಂದು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತೇ ಅಥವಾ ಇದರ ಹಿಂದೆ ದೊಡ್ಡ ಜಾಲ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಜಗಳೂರು ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ಈ ದಂಧೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆಯನ್ನು ಮುಂದುವರೆಸಿದ್ದಾರೆ.

ಕಟ್ಟುನಿಟ್ಟಿನ ಕ್ರಮಗಳ ವಿವರ

* ಪಡಿತರವನ್ನು ಕಪ್ಪು ಮಾರುಕಟ್ಟೆಗೆ ಸಾಗಾಟ ಅಥವಾ ಮಾರಾಟ ಮಾಡಿದರೆ ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಇತರೆ ಅನ್ವಯಿಸುವ ಕಾನೂನುಗಳಡಿ ಪ್ರಕರಣ ದಾಖಲಿಸಲಾಗುತ್ತದೆ.

* ಅಕ್ರಮ ಸಾಗಾಟದಲ್ಲಿ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತದೆ.

* ಚಾಲಕರು, ಮಧ್ಯವರ್ತಿಗಳು, ಗೋದಾಮು ನಿರ್ವಾಹಕರು ಹಾಗೂ ಜಾಲದ ಹಿಂದಿರುವ ಪ್ರಮುಖ ಆರೋಪಿಗಳ ವಿರುದ್ಧ ತನಿಖೆ ನಡೆಸಿ ಬಂಧಿಸಲಾಗುತ್ತದೆ.

* ನ್ಯಾಯಬೆಲೆ ಅಂಗಡಿ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಪರವಾನಗಿಯನ್ನು ಅಮಾನತು ಅಥವಾ ರದ್ದುಪಡಿಸಲಾಗುತ್ತದೆ.

* ಇ-ಪಿಒಎಸ್ ಯಂತ್ರಗಳು, ಆಧಾರ್ ಆಧಾರಿತ ವಿತರಣೆ, ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಡಿಜಿಟಲ್ ಸ್ಟಾಕ್ ಮೇಲ್ವಿಚಾರಣೆಯ ಮೂಲಕ ದುರ್ಬಳಕೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ.

* ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವುದು, ಇ-ಕೆವೈಸಿ ಕಡ್ಡಾಯಗೊಳಿಸುವುದು ಹಾಗೂ ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತದೆ.

* ಸಹಾಯವಾಣಿ, ಜಿಲ್ಲಾ ಆಹಾರ ಇಲಾಖೆ ಕಚೇರಿಗಳು ಹಾಗೂ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ತನಿಖೆ ನಡೆಸಲಾಗುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ ಪಡಿತರ ದುರ್ಬಳಕೆ, ಕಳ್ಳಸಾಗಣೆ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ತಡೆಗಟ್ಟಲು ದಾಳಿ, ವಶಪಡಿಸಿಕೊಳ್ಳುವುದು, ಪ್ರಕರಣ ದಾಖಲಿಸುವುದು, ಬಂಧನ, ಪರವಾನಗಿ ರದ್ದು, ಡಿಜಿಟಲ್ ಮೇಲ್ವಿಚಾರಣೆ ಹಾಗೂ ಫಲಾನುಭವಿಗಳ ಪರಿಶೀಲನೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+