ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳ ಮಾಡಲು ಸಿದ್ಧ: ಸಿಎಂ

ದಾವಣಗೆರೆ, ಫೆಬ್ರವರಿ 10: ನ್ಯಾ.ನಾಗಮೋಹನ್ ದಾಸ್ ಅವರ ಮೀಸಲಾತಿ ವರದಿ ಬಂದ ತಕ್ಷಣವೇ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ಕೊಟ್ಟರು.

ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಯಡಿಯೂರಪ್ಪನವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಹಿತ ಕಾಯಲು ನನ್ನ ಸರ್ಕಾರ ಬದ್ಧವಿದೆ ಎಂದು ಹೇಳಿದರು.

ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸಲು ಸಿದ್ಧನಿದ್ದೇನೆ. ನಿಮ್ಮ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Ready To Increase Reservation Of Valmiki Community CM Yediyurappa Said In Rajanahalli

ನಾಗಮೋಹನದಾಸ್ ಅವರು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ವರದಿ ಕೊಟ್ಟ ತಕ್ಷಣವೇ ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದರಲ್ಲಿ ಸಂಶಯ ಬೇಡ. ಹಿಂದಿನ ಸರ್ಕಾರಗಳಂತೆ ನಾನು ಮಾಡುವುದಿಲ್ಲ. ಕೇವಲ ಪರಿಶಿಷ್ಟ ಜಾತಿ ಮಾತ್ರವಲ್ಲ, ಪರಿಶಿಷ್ಟ ಪಂಗಡದವರಿಗೂ ಅನುಕೂಲ ಮಾಡಿಕೊಡುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+