MP Renukacharya : ಚಂದ್ರಶೇಖರ್ ಅಂತ್ಯಕ್ರಿಯೆ ಬಗ್ಗೆ ಶಾಸಕ ರೇಣುಕಾಚಾರ್ಯ ಮಾಹಿತಿ
ದಾವಣಗೆರೆ, ನವೆಂಬರ್ 4: ನನ್ನ ಪ್ರೀತಿಯ ಸುಪುತ್ರ ಯುವಕರ ಕಣ್ಮಣಿ, ಚಂದ್ರುವಿನ ಅಂತಿಮ ದರ್ಶನವನ್ನು ಹೊನ್ನಾಳಿಯ ಹಿರೇಮಠದಲ್ಲಿರುವ ನನ್ನ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಬೆಳಗ್ಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ನವೆಂಬರ್ 4ರ ಶುಕ್ರವಾರ ಮದ್ಯಾಹ್ನ 12 ಘಂಟೆಗೆ ಮಠದ ವೃತ್ತದಿಂದ ಮರಳೋಣಿ ರಸ್ತೆ, ದುರ್ಗಿಗುಡಿ ಸರ್ಕಲ್‌ನಿಂದ ಪೇಟೆ ಹಳದಮ್ಮ ದೇವಸ್ಥಾನದಿಂದ ಕೆನರಾಬ್ಯಾಂಕ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ದೇವನಾಯ್ಕನಹಳ್ಳಿ ವೃತ್ತ ತಲುಪಿ ನಂತರ ಗೊಲ್ಲರಹಳ್ಳಿ ಮಾರ್ಗವಾಗಿ ಮಾಸಡಿ, ತರಗನಹಳ್ಳಿ, ಸಿಂಗಟಗೆರೆ, ಹನುಮನಹಳ್ಳಿ ಮಾರ್ಗವಾಗಿ ನನ್ನ ಹುಟ್ಟೂರು ಕುಂದೂರು ತಲುಪಲಿದೆ.
ಕುಂದೂರಿನ ಪ್ರಮುಖ ರಸ್ತೆಯಲ್ಲಿ ಅಂತಿಮ ಯಾತ್ರೆ ಸಾಗಿ ನಂತರ ಕುಂದೂರಿನಲ್ಲಿರುವ ನಮ್ಮ ತೆಂಗಿನತೋಟದಲ್ಲಿ ನನ್ನ ತಂದೆ ತಾಯಿ, ಚಂದ್ರುವಿನ ಅಜ್ಜ ಅಜ್ಜಿಯ ಸಮಾಧಿ ಮಧ್ಯೆದಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ.

ಚಂದ್ರಶೇಖರ್ ಅಂತ್ಯಕ್ರಿಯೆ ಸಮಯ:
ಶುಕ್ರವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಕುಂದೂರಿನ ತೆಂಗಿನ ತೋಟದಲ್ಲಿ ಎಲ್ಲ ರೀತಿಯ ಅಂತಿಮ ವಿಧಿವಿಧಾನಗಳ ಮೂಲಕ ಅಂತ್ಯ ಸಂಸ್ಕಾರವು ನಡೆಯಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ನಾಪತ್ತೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆ:
ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವ ಗುರುವಾರ ತುಂಗಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮಗನ ಆಗಮನದ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಈ ಸಾವಿನ ಸುದ್ದಿ ಆಘಾತ ತಂದಿತು.

ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾದ ಹಿನ್ನಲೆ ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಕ್ರೇನ್ ಮೂಲಕ ಕಾರನ್ನು ಮೇಲೆತ್ತಿದ್ದಾರೆ. ಆ ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ. ಮಗನ ಶವ ಕಂಡು ಶಾಸಕ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.












Click it and Unblock the Notifications