ವೀರಶೈವ ಮಹಾಸಭಾದಿಂದ ಸಿಎಂಗೆ 'ಧರ್ಮ'ಕ್ಕಾಗಿ ಮನವಿ : ಶಾಮನೂರು

Subscribe to Oneindia Kannada

ದಾವಣಗೆರೆ, ಜುಲೈ 25: "ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ವೀರಶೈವ ಮಹಾಸಭಾ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ," ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಈಗಾಗಲೇ ಬಸವಣ್ಣನವರ ಪೋಟೋ ಅನಾವರಣ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಗಿತ್ತು. ಇದೀಗ 50 ಜನ ಸ್ವಾಮಿಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸುತ್ತೇವೆ," ಎಂದು ಹೇಳಿದ್ದಾರೆ.

Request for 'Indipendent Lingayat religion' to be submitted to CM – Shamanur
Veerashaiva Lingayatha Must Announced As Separate Religion

"ಈ ಹಿಂದೆಯೇ ಪ್ರತ್ಯೇಕ ಧರ್ಮದ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಪ್ರತ್ಯೇಕ ಧರ್ಮದ ಘೋಷಣೆಯ ಕೆಲಸ ಈ ಹಿಂದಿನ ಸರ್ಕಾರದಲ್ಲೇ ಆಗಬೇಕಾಗಿತ್ತು. ಆದರೆ ಆಗಲಿಲ್ಲ. ಈಗ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಎಲ್ಲರೂ ಒಟ್ಟಾಗಿ, ಒಂದಾಗಿ ಪ್ರತ್ಯೇಕ ಧರ್ಮವನ್ನು ಮಾಡಲು ಹೊರಟಿದ್ದೇವೆ," ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
"There is no question of leaving behind in the separate Lingayat religion," said Shamanur Shivashankarappa, national president of Akhil Bharat Veerashaiva Mahasabha in Davanagere.
Please Wait while comments are loading...