ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ; ಶನಿವಾರ ಕಂದಾಯ ಸಚಿವ, ಡಿಸಿ ಗ್ರಾಮ ವಾಸ್ತವ್ಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 15; ಕೋವಿಡ್ ಕಾರಣದಿಂದಾಗಿ ನಿಲ್ಲಿಸಲಾಗಿದ್ದ ಗ್ರಾಮ ವಾಸ್ತವ್ಯ ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶನಿವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಸವರಾಜ ಬೊಮ್ಮಾಯಿ 11.15ಕ್ಕೆ ಹೊನ್ನಾಳಿಯ ಕಡದಕಟ್ಟೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಸುರಹೊನ್ನೆಯಲ್ಲಿ ಆಯೋಜಿಸಿರುವ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ರಸ್ತೆಯ ಮೂಲಕ ಕುಂದೂರಿಗೆ ಆಗಮಿಸಲಿದ್ದಾರೆ.

ಗಾಂಧಿ ಜಯಂತಿ ವಿಶೇಷ: ಗಾಂಧಿಯ ಖಾದಿ ಕರೆಗೆ ಓಗೊಟ್ಟ ಬದನವಾಳು ಗ್ರಾಮ!ಗಾಂಧಿ ಜಯಂತಿ ವಿಶೇಷ: ಗಾಂಧಿಯ ಖಾದಿ ಕರೆಗೆ ಓಗೊಟ್ಟ ಬದನವಾಳು ಗ್ರಾಮ!

ಇಲ್ಲಿನ ಕಸ್ತೂರ ಬಾ ಶಾಲೆಯಲ್ಲಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ಮಾಡಲಿದ್ದಾರೆ. ವಿವಿಧ ಕಾಮಗಾರಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಉಡುಪಿ: ಸಂಸದರ ಆದರ್ಶ ಗ್ರಾಮ ಕೆರಾಡಿಯಲ್ಲಿ ಸ್ಮಶಾನ ಮೌನ; ಅಭಿವೃದ್ಧಿ ಕಾಣದೇ ಊರು ಬಿಟ್ಟ ಜನರುಉಡುಪಿ: ಸಂಸದರ ಆದರ್ಶ ಗ್ರಾಮ ಕೆರಾಡಿಯಲ್ಲಿ ಸ್ಮಶಾನ ಮೌನ; ಅಭಿವೃದ್ಧಿ ಕಾಣದೇ ಊರು ಬಿಟ್ಟ ಜನರು

ಬಸವರಾಜ ಬೊಮ್ಮಾಯಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೊನ್ನಾಳಿ ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿಗಳು ಮತ್ತೆ ಮಧ್ಯಾಹ್ನ 2.30ಕ್ಕೆ ಹೊನ್ನಾಳಿಯ ಹೆಚ್. ಕಡದಕಟ್ಟೆಯಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?

ಸಿದ್ಧತೆಗಳನ್ನು ಪರಿಶೀಲಿಸಿದ ರೇಣುಕಾಚಾರ್ಯ

ಸಿದ್ಧತೆಗಳನ್ನು ಪರಿಶೀಲಿಸಿದ ರೇಣುಕಾಚಾರ್ಯ

'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ವಿಶೇಷ ಕಾರ್ಯಕ್ರಮದ ಅಂಗವಾಗಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಕುಂದೂರು ಮತ್ತು ಸುರಹೊನ್ನೆ ಗ್ರಾಮಗಳಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹಾಗೂ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿದ್ಧತೆಗಳನ್ನು ಪರಿಶೀಲಿಸಿದರು.

ಕುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರಲ್ಲದೇ, ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಕ್ಟೋಬರ್ 16ರಂದು ವಾಸ್ತವ್ಯ

ಅಕ್ಟೋಬರ್ 16ರಂದು ವಾಸ್ತವ್ಯ

ಕುಂದೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ, ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಶಾಸಕ ಎಂ. ಪಿ. ರೇಣುಕಾಚಾರ್ಯ, ಅಧಿಕಾರಿಗಳು ಶನಿವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯ ಈ ಹಿಂದೆ ನಡೆದ ಗ್ರಾಮ ವಾಸ್ತವ್ಯಗಳಿಗಿಂತ ವೈವಿಧ್ಯ ಹಾಗೂ ವಿಶಿಷ್ಟವಾಗಿರಲಿದ್ದು ಈ ಕಾರ್ಯಕ್ರಮ ಇರಲಿದೆ. ಇದರ ಸದುಪಯೋಗ ಅವಳಿ ಹೊನ್ನಾಳಿ-ನ್ಯಾಮತಿ ತಾಲ್ಲೂಕುಗಳ ಜನರಿಗೆ ಸಿಗಬೇಕೆಂಬ ಸಂಕಲ್ಪ ಈ ಕಾರ್ಯಕ್ರಮದ ಉದ್ದೇಶವಾಗಿದೆ.

"ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಮೊದಲ ಬಾರಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಕಂದಾಯ ಇಲಾಖೆ ಸಚಿವರು ಗ್ರಾಮ ವಾಸ್ತವ್ಯ ಮಾಡುವರು. ಈ ನಿಟ್ಟಿನಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕು" ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ

ಶನಿವಾರ ಬೆಳಗ್ಗೆ ಕಂದಾಯ ಸಚಿವ ಆರ್. ಅಶೋಕ, ಸಂಸದ ಡಾ. ಜಿ. ಎಂ.ಸಿದ್ದೇಶ್ವರ್ ಹಾಗೂ ಜನಪ್ರತಿನಿಧಿಗಳು ಸುರಹೊನ್ನೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ ಶೇ 60 ರಿಂದ 70 ರಷ್ಟು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದಾರೆ. ರಾತ್ರಿ ಕಸ್ತೂರ ಬಾ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ಅಂದು ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Recommended Video

ಟೀಮ್ ಇಂಡಿಯಾ ಹೊಸ ಜರ್ಸಿ ಅನಾವರಣ:ನಿಮ್ಗೂ ಇದೆ ಧರಿಸೋ ಅವಕಾಶ | Oneindia Kannada
ಅಧಿಕಾರಿಗಳಿಗೆ ಜವಾಬ್ದಾರಿ

ಅಧಿಕಾರಿಗಳಿಗೆ ಜವಾಬ್ದಾರಿ

ಸರ್ಕಾರದ ವಿವಿಧ ಇಲಾಖೆಗಳು ಅದರಲ್ಲೂ ಪ್ರಮುಖವಾಗಿ ಕೃಷಿ, ತೋಟಗಾರಿಕೆ, ಕಾರ್ಮಿಕ, ಆರೋಗ್ಯ, ಆಹಾರ, ಬೆಸ್ಕಾಂ, ಸಾರಿಗೆ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳು ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ನೀಡಲಾಗುವ ಸವಲತ್ತುಗಳು, ಸೌಲಭ್ಯಗಳು, ಸಾಲ ಮಂಜೂರಾತಿ ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆಗಾಗಿ ಎಲ್ಲಾ ಇಲಾಖಾ ಅಧಿಕಾರಿಗಳು ಪಟ್ಟಿಯನ್ನು ತಯಾರಿಸಿಕೊಂಡಿದ್ದು, ಫಲಾನುಭವಿಗಳನ್ನು ಕಾರ್ಯಕ್ರಮದಂದು ಕರೆತಂದು ಪುನಃ ಕರೆದುಕೊಂಡು ಹೋಗುವ ಜವಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂಬ ಸೂಚನೆ ಕೊಡಲಾಗಿದೆ.

English summary
Revenue minister R. Ashok and Davanagere deputy commissioner Grama Vastavaiya in Honnalli taluk on October 16, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X