ಆಗ್ನೇಯ ಪದವೀಧರರ ಚುನಾವಣೆ: ದಾವಣಗೆರೆಯಲ್ಲಿ ಅ. 26ರಿಂದ ನಿಷೇಧಾಜ್ಞೆ
ದಾವಣಗೆರೆ, ಅಕ್ಟೋಬರ್ 23: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಇದೇ ಅ.28ರಂದು ಮತದಾನ ನಡೆಯಲಿದ್ದು, ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ. ಅ.28 ರಂದು ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ ಮತ ಕೇಂದ್ರದ ಬಳಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವಂತಿಲ್ಲ.

ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.












Click it and Unblock the Notifications