• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ದಾವಣಗೆರೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ; 7 ಮಂದಿ ಸಾವು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 14: ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರುವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಮಕರ ಸಂಕ್ರಮಣ ದಿನದಂದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಏಳು ಮಂದಿಯ ಪೈಕಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿರುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ.

ದಾವಣಗೆರೆ: ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೊನಾ ಸೋಂಕು, ಇನ್ನೂ ಹೆಚ್ಚುವ ಸಾಧ್ಯತೆ!ದಾವಣಗೆರೆ: ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೊನಾ ಸೋಂಕು, ಇನ್ನೂ ಹೆಚ್ಚುವ ಸಾಧ್ಯತೆ!

ಕಾರು ಅಪಘಾತದ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಯಾದಗಿರಿ ಜಿಲ್ಲೆಯ ಶಹಾಪೂರದವರು ಎಂದು ತಿಳಿದು ಬಂದಿದೆ.

ಕಾರು ಸಂಪೂರ್ಣ ನಜ್ಜುಗುಜ್ಜು:

ಬೆಂಗಳೂರಿನಿಂದ ಹೊಸಪೇಟೆಗೆ ಹೋಗುವ ಮಾರ್ಗ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಜಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

English summary
Seven killed in car collision with divider in Davanagere District Near NH50.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X