Shamanur Shivashankarappa: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು
Shamanur Shivashankarappa: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ತಕ್ಷಣವೇ ಅವರನ್ನು ದಾವಣಗೆರೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿದ್ದು, ಕಫದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಶುಕ್ರವಾರ ಬೆಳಗ್ಗೆ ತೀವ್ರ ಅಸ್ವಸ್ಥರಾದರು. ಹೆಚ್ಚುವರಿ ಚಿಕಿತ್ಸೆಗೆಂದು ನಗರದ ಎಸ್‌ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ವೈದ್ಯರು ಹೆಚ್ಚಿನ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯದಲ್ಲಿ ಚೇತರಿಕೆ: ಕಫದ ಸಮಸ್ಯೆಯಿಂದ ಅಸ್ವಸ್ಥರಾಗಿ ಶಾಮನೂರು ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಎಸ್‌ಎಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣದಿಂದ 2008 ಹಾಗೂ 2013ರ ವಿಧಾನ ಸಭಾ ಚುನಾವಣೆಯಲ್ಲಿ ಜಯವನ್ನು ಸಾಧಿಸಿದ್ದರು. ಈ ಮೂಲಕ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಅನುಭವಿ ಪ್ರತಿನಿಧಿಯಾಗಿಯೂ ಹಾಗೂ ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ದಾವಣಗೆರೆ ದಕ್ಷಿಣದಲ್ಲಿ 2008ರ ಚುನಾವಣೆಗ ವೇಳೆ ಶಿವಶಂಕರಪ್ಪನವರು ಬಿಜೆಪಿ ಪಕ್ಷದ ಯಶವಂತ ರಾವ್ ಜಾಧವ್ ಅವರನ್ನು ಸುಮಾರು 5500 ಮತಗಳಿಂದ ಸೋಲಿಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರು.
2013ರಲ್ಲಿ ನಡೆದ ಚುನಾವಣೆಯಲ್ಲಿಯೂ ಸಹ ಶಾಮನೂರು ಶಿವಶಂಕರಪ್ಪನವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.











Click it and Unblock the Notifications