ಚಾಮುಂಡೇಶ್ವರಿಯಲ್ಲಿ ಈಗಾಗಲೇ ಸಿದ್ದರಾಮಯ್ಯಗೆ ಸೋಲಿನ ಭೀತಿ: ಎಚ್ ಡಿಕೆ

ಹರಿಹರ (ದಾವಣಗೆರೆ ಜಿಲ್ಲೆ), ಏಪ್ರಿಲ್ 1: "ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕೀಯದ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಪಕ್ಷ ನೇರವಾಗಿ ಸೋಲಿಸುತ್ತದೆ. ಮೂರು ದಿನದ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಅರಿವಾಗಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ .

ರಾಜಸ್ತಾನದ ಪ್ರೋಖ್ರಾನ್ ನಲ್ಲಿ ಹುತಾತ್ಮರಾದ ಯೋಧ ಜಾವೀದ್ ಅವರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಇರುವ ಮನೆಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ ‌ನೀಡಿ, ಯೋಧರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.

ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವು ಕಷ್ಟ. ಆ ಕ್ಷೇತ್ರದ ಜನತೆ ಅವರಿಗೆ ಬುದ್ಧಿ ಕಲಿಸಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಶುರುವಾಗಿದೆ ಎಂದರು.

Siddaramaiah afraid of defeat in Chamundeshwari constituency

ಗಾಲಿ ಜನಾರ್ದನ ರೆಡ್ಡಿ ಅವರಿಗೂ ಬಿಜೆಪಿಗೂ ಸಂಬಂಧ ಇಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅದು ಬಿಜೆಪಿಯವರ ವೈಯಕ್ತಿಕ ವಿಚಾರ. ಅದಕ್ಕೆ ನಾನೇನೂ ಹೇಳುವುದಿಲ್ಲ. ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆ ಇಲ್ಲ‌. ಅದರಲ್ಲೂ ಸಮಾಜಘಾತುಕ ಶಕ್ತಿಗಳು ನಮಗೆ ಬೇಕಾಗಿಲ್ಲ ಎಂದರು.

ಚಿತ್ರಗಳು : ವಿಕಾಸ ಪರ್ವ ಯಾತ್ರೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

ಇನ್ನು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಜನ್ಮದಿನದ ಶುಭಾಶಯ ತಿಳಿಸಿದ ಅವರು, ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡಿ ಗೌರವಿಸಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+