ಚಾಮುಂಡೇಶ್ವರಿ ಸೋಲು ನೆನಪಿಸಿಕೊಂಡು ಬೇಸರಗೊಂಡ ಸಿದ್ದರಾಮಯ್ಯ
Recommended Video

ದಾವಣಗೆರೆ, ಡಿಸೆಂಬರ್ 04 : 'ಕೆಲಸ ಮಾಡುವವರನ್ನು ಜನರು ಮರೆತಿದ್ದಾರೆ. ಜನರಿಗೆ ಸೇವೆ ಮಾಡಿದ ನನ್ನನ್ನು ಸಹ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಮಂಗಳವಾರ ಹರಪನಹಳ್ಳಿ ಕ್ಷೇತ್ರದ ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಅವರಿಗೆ 'ನುಡಿ-ನಮನ' ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು, ವಿಧಾನಸಭೆ ಚುನಾವಣೆ ಫಲಿತಾಂಶವನ್ನು ನೆನಪು ಮಾಡಿಕೊಂಡರು.
'ಎಂ.ಪಿ.ರವೀಂದ್ರ ಅವರು ಹರಪನಹಳ್ಳಿಯನ್ನು 371ಜೆ ಕಲಂಗೆ ಸೇರಿಸಲು ಸಾಕಷ್ಟು ಹೋರಾಟ ಮಾಡಿದ್ದರು. ಏಕಾಏಕಿ ಚುನಾವಣಾ ನಿವೃತ್ತಿ ಘೋಷಣೆ ಮಾಡಿದಾಗ ನಾನು ಅವರಿಗೆ ಕರೆ ಮಾಡಿ, ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದೆ' ಎಂದು ಸಿದ್ದರಾಮಯ್ಯ ಹೇಳಿದರು.
ಮಾಜಿ ಸಚಿವ ಎಂ.ಪಿ.ಪ್ರಕಾಶ್ ಪುತ್ರ ಎಂ.ಪಿ.ರವೀಂದ್ರ ಅವರು ನವೆಂಬರ್ 3ರಂದು ವಿಧಿವಶರಾಗಿದ್ದರು. 2013ರ ಚುನಾವಣೆಯಲ್ಲಿ ಅವರು ಹರಪನಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2018ರ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

ಜನ ನನ್ನನ್ನೇ ಸೋಲಿಸಿದರು
'ಇಂದಿನ ದಿನಗಳಲ್ಲಿ ಜನರು ಕೆಲಸ ಮಾಡುವವರನ್ನು ಮರೆಯುತ್ತಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ನಾಡಿನ ಜನರಿಗಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿತ್ತು. ನಾನು ಚುನಾವಣೆಯಲ್ಲಿ ಸೋಲುತ್ತೇನೆ ಎಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಆದರೆ, ಚಾಮುಂಡೇಶ್ವರಿ ಕ್ಷೇತ್ರದ ಜನರು ನನ್ನನ್ನೇ ಸೋಲಿಸಿದರು. ಬಾದಾಮಿ ಜನರಿಗೆ ಕೈ ಹಿಡಿದಿದ್ದರಿಂದ ಮಾತನಾಡುವಂತಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.

ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ
'2018ರ ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಚಾಮುಂಡೇಶ್ವರಿ ಕ್ಷೇತ್ರದ ಫಲಿತಾಂಶ ನೋಡಿ ನಾನು ಒಂದು ಕ್ಷಣ ದಿಗ್ಬ್ರಮೆಗೊಂಡೆ. ಒಂದು ವೇಳೆ ಬಾದಾಮಿ ಕ್ಷೇತ್ರದ ಜನರು ನನ್ನ ಕೈ ಹಿಡಿಯದೇ ಇದ್ದರೆ ನಾನು ಇಲ್ಲಿಯವರೆಗೂ ಬರಲು ಸಾಧ್ಯವಾಗುತ್ತಿರಲಿಲ್ಲ' ಎಂದು ಹೇಳಿದ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದರು.

ಸಿದ್ದರಾಮಯ್ಯ ಸೋಲು
2018ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು 85283 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರು 121325 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಜಯಗಳಿಸಿದ್ದರು.

ಅಭಿವೃದ್ಧಿ ಕನಸನ್ನು ಹೊಂದಿದ್ದರು
'ಎಂ.ಪಿ.ರವೀಂದ್ರ ಅವರು ಒಳ್ಳೆಯ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯಾಗಿದ್ದರು. ಸದಾ ಅಭಿವೃದ್ಧಿ ಕನಸನ್ನು ಹೊಂದಿದ್ದರು. ಎಂ.ಪಿ.ಪ್ರಕಾಶ್ ಅವರು ಕೂಡಾ ಉತ್ತಮ ಸಾಹಿತಿ, ಹಾಡುಗಾರ, ಆಡಳಿತಗಾರ. ತಂದೆಯ ಗುಣಗಳನ್ನು ರವೀಂದ್ರ ಅವರು ಬೆಳೆಸಿಕೊಂಡಿದ್ದರು' ಎಂದು ಸಿದ್ದರಾಮಯ್ಯ ಬಣ್ಣಿಸಿದರು.

ಚುನಾವಣೆ ನಿವೃತ್ತಿ ಘೋಷಣೆ ಮಾಡಿದರು
'ಎಂ.ಪಿ.ರವೀಂದ್ರ ಅವರು ಏಕಾಏಕಿ ಚುನಾವಣಾ ನಿವೃತ್ತಿ ಘೋಷಣೆ ಮಾಡಿದರು. ಆಗ ನಾನೇ ಅವರಿಗೆ ಕರೆ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿದ್ದೆ. ಆಗ ಅವರು ಹರಪನಹಳ್ಳಿಯನ್ನು 371 ಜೆ ಕಲಂಗೆ ಸೇರಿಸಬೇಕು ಎಂದು ಬೇಡಿಕೆ ಇಟ್ಟಿದ್ದರು. ಅವರ ಮನವಿಯಂತೆ ಹರಪನಹಳ್ಳಿಯನ್ನು 371 ಜೆ ಕಲಂಗೆ ಸೇರಿಸಿದ್ದೆ' ಎಂದು ಸಿದ್ದರಾಮಯ್ಯ ನೆನಪು ಮಾಡಿಕೊಂಡರು.

2018ರ ಚುನಾವಣೆ ಸೋಲು
ಎಂ.ಪಿ.ರವೀಂದ್ರ ಅವರು 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರ ವಿರುದ್ಧ 57956 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ನವೆಂಬರ್‌ನಲ್ಲಿ ಅವರು ವಿಧಿವಶರಾಗಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
Karnataka Election: ಪಂಚರಾಜ್ಯಗಳ ಜೊತೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ದಿನಾಂಕ ಘೋಷಣೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications