ದಾವಣಗೆರೆ; ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ

ದಾವಣಗೆರೆ, ಡಿಸೆಂಬರ್ 21: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಶಿವಕುಮಾರ್ (49) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ. ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಆಗಿ ಶಿವಕುಮಾರ್ ಕೆಲಸ ಮಾಡುತ್ತಿದ್ದರು. ನಗರದ ಆಂಜನೇಯ ಬಡಾವಣೆಯ ನಿವಾಸಿಯಾಗಿದ್ದರು.

ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಯಿಂದ ಕಚೇರಿಗೆ ಶಿವಕುಮಾರ್ ಆಗಮಿಸಿದ್ದರು. ಭಾನುವಾರ ರಜೆ ದಿನವಾದ ಕಾರಣ ಕಚೇರಿಯಲ್ಲಿ ಯಾರೂ ಸಹ ಇರಲಿಲ್ಲ. ಆಗ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Social Welfare Department Officer Commits Suicide

ಸೋಮವಾರ ಬೆಳಗ್ಗೆ ಸಿಬ್ಬಂದಿಗಳು ಕಚೇರಿ ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ದಾವಣಗೆರೆಯ ಗಾಂಧಿನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ.

"ಶಿವಕುಮಾರ್‌ಗೆ ಆರೋಗ್ಯ ಸಮಸ್ಯೆ ಇತ್ತು. ಅದಕ್ಕೆ ಚಿಕಿತ್ಸೆ ಕೊಡಿಸಿದ್ದೆವು. ಮಾಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತಮ ಅಧಿಕಾರಿಯಾಗಿದ್ದು, ಇನ್ನೂ ಅವರು ಮಾಡುವ ಕೆಲಸ ಬಹಳಷ್ಟಿತ್ತು" ಎಂದು ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+