ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ; ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 21: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಶಿವಕುಮಾರ್ (49) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ. ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಆಗಿ ಶಿವಕುಮಾರ್ ಕೆಲಸ ಮಾಡುತ್ತಿದ್ದರು. ನಗರದ ಆಂಜನೇಯ ಬಡಾವಣೆಯ ನಿವಾಸಿಯಾಗಿದ್ದರು.

ದೆಹಲಿ ಗಡಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗಿದ ನಂತರ ಪಂಜಾಬ್ ರೈತ ಆತ್ಮಹತ್ಯೆದೆಹಲಿ ಗಡಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗಿದ ನಂತರ ಪಂಜಾಬ್ ರೈತ ಆತ್ಮಹತ್ಯೆ

ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಯಿಂದ ಕಚೇರಿಗೆ ಶಿವಕುಮಾರ್ ಆಗಮಿಸಿದ್ದರು. ಭಾನುವಾರ ರಜೆ ದಿನವಾದ ಕಾರಣ ಕಚೇರಿಯಲ್ಲಿ ಯಾರೂ ಸಹ ಇರಲಿಲ್ಲ. ಆಗ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೇಮ ಪ್ರಕರಣ; ಯುವತಿ ಆತ್ಮಹತ್ಯೆ, ಪ್ರಿಯಕರನ ಕೊಂದ ಅಣ್ಣಂದಿರು! ಪ್ರೇಮ ಪ್ರಕರಣ; ಯುವತಿ ಆತ್ಮಹತ್ಯೆ, ಪ್ರಿಯಕರನ ಕೊಂದ ಅಣ್ಣಂದಿರು!

Social Welfare Department Officer Commits Suicide

ಸೋಮವಾರ ಬೆಳಗ್ಗೆ ಸಿಬ್ಬಂದಿಗಳು ಕಚೇರಿ ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ: ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸಲು ಸಿದ್ಧತೆ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ: ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸಲು ಸಿದ್ಧತೆ

ದಾವಣಗೆರೆಯ ಗಾಂಧಿನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ.

Recommended Video

Rahul Dravid ಅವರನ್ನು ಶೀಘ್ರದಲ್ಲೇ ಆಸ್ಟ್ರೇಲಿಯಾಗೆ ಕಳುಹಿಸಿ | Oneindia Kannada

"ಶಿವಕುಮಾರ್‌ಗೆ ಆರೋಗ್ಯ ಸಮಸ್ಯೆ ಇತ್ತು. ಅದಕ್ಕೆ ಚಿಕಿತ್ಸೆ ಕೊಡಿಸಿದ್ದೆವು. ಮಾಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತಮ ಅಧಿಕಾರಿಯಾಗಿದ್ದು, ಇನ್ನೂ ಅವರು ಮಾಡುವ ಕೆಲಸ ಬಹಳಷ್ಟಿತ್ತು" ಎಂದು ಅಧಿಕಾರಿಗಳು ಹೇಳಿದ್ದಾರೆ.

English summary
49 year old Shivakumar who working as manager of social welfare department in Davanagere deputy commissioner commits suicide in office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X