ದಾವಣಗೆರೆಯ ಸುಂದರ ಗ್ಲಾಸ್ ಹೌಸ್ ವಿಶೇಷತೆಗಳು

Posted By: ದಾವಣಗೆರೆ ಪ್ರತಿನಿಧಿ
Subscribe to Oneindia Kannada

ದಾವಣಗೆರೆ, ಮಾರ್ಚ್ 13 : ಭಾರತದ ಅತ್ಯಂತ ದೊಡ್ಡ ಗಾಜಿನ ಅರಮನೆ ದಾವಣಗೆರೆಯಲ್ಲಿ ನಿರ್ಮಾಣವಾಗಿದೆ. ಸ್ವರ್ಗವನ್ನೇ ಧರೆಗಿಳಿಸುವ ಗಾಜಿನ ಅರಮನೆಯನ್ನು ಸುಮಾರು 30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ. 2014-15 ನೇ ಸಾಲಿನಲ್ಲಿ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾಗ 5 ಕೋಟಿ ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಈಗ ಅಂದಾಜು 30 ಕೋಟಿ ರೂಪಾಯಿಗೆ ಬಂದು ತಲುಪಿದೆ.

ದಾವಣಗೆರೆ : 2013ರಲ್ಲಿ ಸೋತವರು, ಗೆದ್ದವರು

ಇದು ಬೆಂಗಳೂರಿನ ಲಾಲ್ ಬಾಗ್‌ನಲ್ಲಿರುವ ಗ್ಲಾಸ್ ಹೌಸ್‌ಗಿಂತ ದೊಡ್ಡದಾಗಿದೆ. ಅಲ್ಲದೆ ಇಡೀ ದೇಶದಲ್ಲೇ ಇದು ದೊಡ್ಡ ಅರಮನೆಯಾಗಿದೆ. ಇಂತಹ ಸುಂದರ ಸ್ಥಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ.

Specialities of Davanagere glass house

ಅರಮನೆಯಲ್ಲಿ ಏನಿದೆ? : ಗಾಜಿನ ಮನೆಗೆ 13.35 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 1.50 ಕೋಟಿ ವೆಚ್ಚದಲ್ಲಿ ಗ್ರಾನೈಟ್, 1.99 ಕೋಟಿ ವೆಚ್ಚದಲ್ಲಿ ಕಾಂಪೌಂಡ್, 1.08 ಕೋಟಿ ವೆಚ್ಚದಲ್ಲಿ ತೋಟಗಾರಿಕೆ ಮಾಹಿತಿ ಕೇಂದ್ರ, ರಸ್ತೆ ನಿರ್ಮಾಣ, ಸುತ್ತಮುತ್ತ ವಿದೇಶಿ ಗಿಡಗಳನ್ನು ಬೆಳೆಸುವ ಜೊತೆ ಸುಂದರವಾದ ಉದ್ಯಾನವನ ನಿರ್ಮಾಣದ ಗುರಿ ಹೊಂದಲಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ವಿರುದ್ಧ ಯಾರಿಗೆ ಜಯ?

Specialities of Davanagere glass house

ವಿಸ್ತೀರ್ಣ ಮತ್ತು ಸೌಂದರ್ಯದಲ್ಲಿ ಬೆಂಗಳೂರಿನ ಲಾಲ್ ಬಾಗ್ ಗಾಜಿನ ಅರಮನೆಯನ್ನು ಮೀರಿಸುತ್ತದೆ. ದಾವಣಗೆರೆ ಸುತ್ತಮುತ್ತ ಪ್ರವಾಸಿಗರಿಗೆ ಹೇಳಿ ಮಾಡಿಸಿದಂತಹ ಯಾವುದೇ ಪ್ರವಾಸಿ ತಾಣ ಇರಲಿಲ್ಲ. ಈಗ ಇಂತಹ ಸುಂದರ ಗಾಜಿನ ಅರಮನೆ ನಿರ್ಮಾಣವಾಗಿದೆ.

Specialities of Davanagere glass house

ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾದ ದಾವಣಗೆರೆಗೆ ಈ ಗಾಜಿನ ಅರಮನೆ ಮತ್ತೊಂದು ಗರಿಯನ್ನು ತಂದುಕೊಡಲಿದೆ. ಈ ಸುಂದರವಾದ ಅರಮನೆ ದೇಶ-ವಿದೇಶದ ಪ್ರವಾಸಿಗರನ್ನು ದಾವಣಗೆರೆಯತ್ತ ಸೆಳೆಯುವ ಜೊತೆಗೆ ಜಿಲ್ಲೆಯ ಹಿರಿಮೆಯನ್ನೂ ಹೆಚ್ಚಿಸಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government established glass house near Kundavada lake, Davanagere. All set for inauguration of glass house. Here are the specialities of the glass house.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ