ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಗೊಂದಲ ಮೂಡಿಸಿದ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ!

|
Google Oneindia Kannada News

ದಾವಣಗೆರೆ, ಏಪ್ರಿಲ್ 01 : ಅಚ್ಚರಿಯ ಬೆಳವಣಿಗೆಯೊಂದಲ್ಲಿ ಕರ್ನಾಟಕ ಕಾಂಗ್ರೆಸ್ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಯಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡಿದೆ. ಲೋಕಸಭಾ ಚುನಾವಣೆಗೆ ಅವರು ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆ ಎಂಬ ನಿರೀಕ್ಷೆ ಇತ್ತು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಹಲವು ನಾಯಕರ ಹೆಸರು ಕೇಳಿ ಬಂದರೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಏಪ್ರಿಲ್ 4 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 23ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ದಾವಣಗೆರೆ : ಚುನಾವಣೆಗೆ ಶಾಮನೂರು ಕುಟುಂಬದವರು ಸ್ಪರ್ಧಿಸಲ್ಲ!ದಾವಣಗೆರೆ : ಚುನಾವಣೆಗೆ ಶಾಮನೂರು ಕುಟುಂಬದವರು ಸ್ಪರ್ಧಿಸಲ್ಲ!

ಸೋಮವಾರ ಕರ್ನಾಟಕ ಕಾಂಗ್ರೆಸ್ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿದೆ. ಕಾಂಗ್ರೆಸ್ ಇನ್ನೂ ದಾವಣಗೆರೆ, ಧಾರವಾಡ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ದಾವಣಗೆರೆ ಕ್ಷೇತ್ರದ ಚುನಾವಣಾ ಪುಟ

ದಾವಣಗೆರೆ ಕ್ಷೇತ್ರದಿಂದ ಜಿ.ಎಂ.ಸಿದ್ದೇಶ್ವರ ಅವರು ಬಿಜೆಪಿ ಅಭ್ಯರ್ಥಿ. ಮೂರು ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಬಾರಿಸಿರುವ ಅವರು 4ನೇ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ. ಆದರೆ, ಅವರ ಎದುರಾಳಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.....

ಟಿಕೆಟ್ ನಿರಾಕರಣೆ

ಟಿಕೆಟ್ ನಿರಾಕರಣೆ

ದಾವಣಗೆರೆ ಕ್ಷೇತ್ರಕ್ಕೆ 88 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಅಭ್ಯರ್ಥಿ ಎಂದು ಎಐಸಿಸಿ ಘೋಷಣೆ ಮಾಡಿತ್ತು. ಆದರೆ, ಅವರು ಅಭ್ಯರ್ಥಿಯಾಗಲು ನಿರಾಕರಿಸಿದರು. ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದರು.

ಎಸ್.ಎಸ್.ಮಲ್ಲಿಕಾರ್ಜುನ

ಎಸ್.ಎಸ್.ಮಲ್ಲಿಕಾರ್ಜುನ

ಮೂರು ಲೋಕಸಭಾ ಚುನಾವಣೆ ಮತ್ತು 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಎಸ್.ಎಸ್.ಮಲ್ಲಿಕಾರ್ಜುನ ಅವರು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದರು. ಆದರೆ, ಶಾಮನೂರು ಕುಟುಂಬ ಸದಸ್ಯರೇ ಅಭ್ಯರ್ಥಿ ಆಗಬೇಕು ಎಂದ ಹೈಕಮಾಂಡ್ ಹೇಳಿತು.

ಮನವೊಲಿಸಿದ ಕೆಪಿಸಿಸಿ ಅಧ್ಯಕ್ಷ

ಮನವೊಲಿಸಿದ ಕೆಪಿಸಿಸಿ ಅಧ್ಯಕ್ಷ

ಶುಕ್ರವಾರ ಎಸ್.ಎಸ್.ಮಲ್ಲಿಕಾರ್ಜುನ ಅವರ ಜೊತೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮನವೊಲಿಸಿದರು. ಇದಕ್ಕೆ ಅವರು ಒಪ್ಪಿಗೆ ಕೊಟ್ಟಿದ್ದರು.

ಉಸ್ತುವಾರಿಯಾಗಿ ನೇಮಕ

ಉಸ್ತುವಾರಿಯಾಗಿ ನೇಮಕ

ಆದರೆ, ಸೋಮವಾರ ಕರ್ನಾಟಕ ಕಾಂಗ್ರೆಸ್‌ ಎಸ್.ಎಸ್.ಮಲ್ಲಿಕಾರ್ಜನ ಅವರನ್ನು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿದೆ. ಆದ್ದರಿಂದ, ಮೈತ್ರಿಕೂಟ ಅಭ್ಯರ್ಥಿ ಯಾರು? ಎಂಬುದು ಪ್ರಶ್ನೆಯಾಗಿದೆ.

ಹಲವರು ಹೆಸರು ಹೇಳಿಬರುತ್ತಿದೆ

ಹಲವರು ಹೆಸರು ಹೇಳಿಬರುತ್ತಿದೆ

ದಾವಣಗೆರೆ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ದಾವಣಗೆರೆ ಜಿಲ್ಲಾ ಪಂಚಾಯಿತಿ ಪಕ್ಷೇತರ ಸದಸ್ಯ ತೇಜಸ್ವಿ ಪಟೇಲ್ ಅವರ ಹೆಸರುಗಳು ಕೇಳಿಬರುತ್ತಿವೆ. ಅಭ್ಯರ್ಥಿ ಯಾರು?.

English summary
Karnataka Congress appointed Former minister S.S.Mallikarjun as charge of Davanagere lok sabha seat. Congress yet to announce candidate for Davanagere after senior party leader Shamanur Shivashankarappa declined to contest for Lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X