ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಹತ್ವದ ಘಟ್ಟ: ಎಂಪಿಆರ್

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 29: ಹತ್ತನೇ ತರಗತಿ ಅನ್ನುವುದು ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ, ಹಾಗೆ ಪಾಸ್ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.

Recommended Video

ಕಾರ್ ಬಿಟ್ಟು ಸೈಕಲ್ ನಲ್ಲಿ ಹೊರಟ ಸಿದ್ದರಾಮಯ್ಯ | Siddaramaiah | Oneindia Kannada

ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಆರೋಗ್ಯ ಕೂಡಾ ಮುಖ್ಯ, ಅದರ ಜೊತೆಗೆ ಅವರ ಬದುಕು ಕೂಡ ಮುಖ್ಯ. ಆದ್ದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅನಿವಾರ್ಯವಾಗಿ ಮಾಡುತ್ತಿಲ್ಲ, ಮಕ್ಕಳ ಹಿತದೃಷ್ಟಿಯಿಂದ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕಂಟೇನ್ಮೆಂಟ್ ಜೋನ್‌ನ SSLC ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಕಂಟೇನ್ಮೆಂಟ್ ಜೋನ್‌ನ SSLC ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

ಕೊರೊನಾ ವೈರಸ್ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದಾರೆ. ಆದರೆ ಪ್ರತಿಪಕ್ಷಗಳು ಸಭೆಯಲ್ಲಿ ಸಲಹೆ ಸೂಚನೆ ಕೊಡುವ ಬದಲು ಹೊರಗೆ ಟೀಕೆ ಮಾಡೋದು ಸರಿಯಲ್ಲ ಎಂದರು.

SSLC Examination Very Important For Students: Renukacharya

ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಸಕ ರೇಣುಕಾಚಾರ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರ ನೋಟ್ ಪ್ರಿಂಟ್ ಒತ್ತುತ್ತಾ? ನಾಳೆ ಖಜಾನೆ ಖಾಲಿಯಾದಾಗ ಸಿದ್ದರಾಮಯ್ಯನವರೆ ಶ್ವೇತ ಪತ್ರ ಹೊರಡಿಸಿ ಅಂತಾರೆ. ಶ್ವೇತ ಪತ್ರ ಹೊರಡಿಸೋದು ಹುಡುಗಾಟಿಕೇನಾ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.

English summary
"The 10th Class is an important moment for students," said CM Political Secretary Renukacharya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X