• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಂಟೇನ್ಮೆಂಟ್ ಜೋನ್‌ನ SSLC ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

|

ದಾವಣಗೆರೆ, ಜೂನ್ 23: ಕಂಟೇನ್ಮೆಂಟ್ ಜೋನ್‌ನ SSLC ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

   Karnataka Lockdown? ಲಾಕ್ ಡೌನ್ ಎದುರಿಸಲು ಕರ್ನಾಟಕ ರಾಜ್ಯ ಎಲ್ಲಾ ರೀತಿಯಲ್ಲೂ ರೆಡಿ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಕಂಟೈನ್ಮೆಂಟ್ ಜೋನ್‌ನ ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ 96 ವಿದ್ಯಾರ್ಥಿಗಳು ಕಂಟೈನ್ಮೆಂಟ್ ಜೋನ್‌ನಲ್ಲಿದ್ದು, ಪರೀಕ್ಷೆ ಬರೆಯಲಿದ್ದಾರೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

   SSLC ಪರೀಕ್ಷೆ ನಡೆಸುವ ಹಠದಿಂದ ಸರ್ಕಾರ ಹಿಂದೆ ಸರಿಯಲಿ- ಎಎಪಿ

   ಸೋಂಕಿತರ ಮನೆಯಲ್ಲಿ ಇರುವ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯೇ ಇಲ್ಲ. ಶಿಕ್ಷಣ ಸಚಿವರ ಸಲಹೆ ಮೇರೆಗೆ ಸೋಂಕಿತ ಕುಟುಂಬದವರಿಗೆ ಪರೀಕ್ಷೆ ಇಲ್ಲ. ಸಪ್ಲಿಮೆಂಟರಿಯಲ್ಲಿ ಪರೀಕ್ಷೆಗೆ ಅನುವು ಮಾಡಿಕೊಡಲಾಗುತ್ತದೆ ಎಂದಿದ್ದಾರೆ.

   ಜಿಲ್ಲೆಯಲ್ಲಿ ಸೋಂಕಿತರ ಮನೆಯಲ್ಲಿರುವ ಇಬ್ಬರೂ ವಿದ್ಯಾರ್ಥಿಗಳನ್ನ ಪತ್ತೆ ಮಾಡಲಾಗಿದೆ. ಹೀಗಾಗಿ, ಹರಿಹರ ಹಾಗೂ ಚನ್ನಗಿರಿಯ ಇಬ್ಬರೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

   ಕೊರೊನಾ ಸೋಂಕಿನ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದ್ದು, ಅದರ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪ್ರಾರಂಭ ಮಾಡಲು ಸರ್ಕಾರ ಮುಂದಾಗಿದೆ.

   English summary
   Containment zones SSLC students write exam in a separate room says Davanagere DC Mahantesh Bilagi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X