Karnataka assembly election 2023: ರೇಣುಕಾಚಾರ್ಯಗೆ ಟಿಕೆಟ್ ಘೋಷಿಸಿಬಿಟ್ರಾ ಬಿ.ಎಸ್.ಯಡಿಯೂರಪ್ಪ?, ಇಲ್ಲಿದೆ ಮಾಹಿತಿ
ಹೊನ್ನಾಳಿ, ಮಾರ್ಚ್, 17: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊನ್ನಾಳಿ-ನ್ಯಾಮತಿ ಕ್ಷೇತ್ರದಿಂದ ಎಂ. ಪಿ. ರೇಣುಕಾಚಾರ್ಯ ಅವರನ್ನು 20 ರಿಂದ 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಹಾಗೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ರೇಣುಕಾಚಾರ್ಯರಿಗೆ ಈ ಬಾರಿ ಆಶೀರ್ವದಿಸಿ ಎಂದು ಹೇಳುವ ಮೂಲಕ ಅವರಿಗೆ ಟಿಕೆಟ್ ನೀಡುವುದು ಎಂಬ ಸಂದೇಶವನ್ನು ರವಾನಿಸಿದರು.
ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಇಲ್ಲಿನ ಜನಸ್ತೋಮ ನೋಡಿದಾಗ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ರೇಣುಕಾಚಾರ್ಯ ಗೆಲ್ಲುವುದು ಅಷ್ಟೇ ಸತ್ಯ ಎಂದರು.

50 ಸಭೆಗಳನ್ನು ಮಾಡಿ ಬಂದಿದ್ದೇನೆ
20 ರಿಂದ 25 ಸಾವಿರ ಮತಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬುದಕ್ಕೆ ನೀವೇ ಸಾಕ್ಷಿ. ದೊಡ್ಡ ಪ್ರಮಾಣದಲ್ಲಿ ಸೇರಿದ್ದೀರಾ. 50 ಸಭೆಗಳನ್ನು ಮಾಡಿ ಬಂದಿದ್ದೇನೆ. ಒಂದೂವರೆ ಎರಡು ಗಂಟೆ ತಡವಾದರೂ ಇಷ್ಟು ಜನರು ಸೇರಿರುವುದು ರೇಣುಕಾಚಾರ್ಯರ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ. ಹೊನ್ನಾಳಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ರಾತ್ರಿಯಲ್ಲಾ ಓಡಾಡಿ ನಿಮ್ಮ ಕಷ್ಟಕ್ಕೆ ಸ್ಪಂದಿಸಿ ಅಭಿಮಾನ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದೀರಾ.
ನೀವು ಮನೆ ಮನೆಗೆ ಹೋಗಿ ವಿಚಾರಿಸಿ. ನಮ್ಮ ಸರ್ಕಾರ, ಬೊಮ್ಮಾಯಿ ಸರ್ಕಾರ ಒಂದಲ್ಲಾ ಒಂದು ಸೌಲಭ್ಯ ಕೊಟ್ಟಿದೆ. ರೇಣುಕಾಚಾರ್ಯರನ್ನು 20 ರಿಂದ 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
ರೇಣುಕಾಚಾರ್ಯ ಹೊನ್ನಾಳಿ ಹುಲಿ ಆಗಿದ್ದಾರೆ
ನಂತರ ಬಸವರಾಜ ಬೊಮ್ಮಾಯಿ ಮಾತನಾಡಿ, ದಾಖಲೆ ಪ್ರಮಾಣದಲ್ಲಿ ಸೇವೆ ಮಾಡಿರುವುದು ಹೊನ್ನಾಳಿಯ ಹುಲಿ ರೇಣುಕಾಚಾರ್ಯ ಆಗಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಇರುವುದರಿಂದ ಇಷ್ಟೊಂದು ಅನುದಾನ ತರಲು ಸಾಧ್ಯವಾಯಿತು. ಹಾಗೆಯೇ 1900 ಕೋಟಿ ರೂಪಾಯಿಗೂ ಅಧಿಕ ಹಣ ತರುವುದು ಸುಲಭದ ಕೆಲಸವಲ್ಲ ಎಂದರು.

ಒಂದೊಂದು ಹಳ್ಳಿಗೆ ಹತ್ತು ಬಾರಿ ಬಂದಿರುವ ರೇಣುಕಾಚಾರ್ಯ, ಜನರಿಗೆ ಬೇಸರವಾಗುತ್ತದೆ. ಅಷ್ಟು ಸಲ ಹೋಗಬೇಡಿ ಅಂದರೂ ಕೇಳಲಿಲ್ಲ. ಅದೇ ಅವರ ಬದುಕಾಗಿದೆ. ಜನಪ್ರಿಯ ಶಾಸಕರಿದ್ದರೂ ಕೂಡ ಜನೋಪಯೋಗಿ ಶಾಸಕರು ಕಡಿಮೆ ಇದ್ದಾರೆ. ಆದರೆ ರೇಣುಕಾಚಾರ್ಯ ಮಾತ್ರ ಜನಪ್ರಿಯ ಶಾಸಕರಾಗಿದ್ದಾರೆ. ಆದ್ದರಿಂದ ಅವರನ್ನು ಬೆಂಬಲಿಸಿ ಎಂದು ಜನರಿಗೆ ಮನವಿ ಮಾಡಿದರು.
ಸಿಎಂ ಸೂಚಿಸಿದ್ರೆ ಸ್ಪರ್ಧೆ ಮಾಡ್ತೇನೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರೆ ಹೊನ್ನಾಳಿಯಿಂದ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದರೆ ಕಣಕ್ಕಿಳಿಯಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಘೋಷಿಸಿದರು.
ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಟಿಕೆಟ್ ನೀಡದಿದ್ದರೆ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ನೀವೆಲ್ಲರೂ ಆಶೀರ್ವಾದ ಮಾಡಿದ್ದೀರ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಇಲ್ಲಿಗೆ ಬಂದಿದ್ದಾರೆ. ಅವರು ನಿಲ್ಲಿ ಅಂದರೆ ನಿಲ್ಲುತ್ತೇನೆ ಎಂದರು.
ಕಾರ್ಯಕರ್ತನಾಗಿ ಕ್ಷೇತ್ರದಲ್ಲಿ ದುಡಿಯುತ್ತೇನೆ. ನಾನು ಬೀದಿ ನಾಟಕ ಮಾಡಿಲ್ಲ, ಮಾಡುವುದೂ ಇಲ್ಲ. ನಿಮ್ಮಂತಹ ಜನರನ್ನು ಪಡೆದಿದ್ದು ನನ್ನ ಪುಣ್ಯ. ಯಡಿಯೂರಪ್ಪ, ಬೊಮ್ಮಾಯಿ ಅವರಷ್ಟೇ ನಿಮ್ಮ ಆಶೀರ್ವಾದವೂ ಮುಖ್ಯವಾಗಿದೆ. ಯಡಿಯೂರಪ್ಪ ತಂದೆ ಸಮಾನ, ಬೊಮ್ಮಾಯಿ ಅಣ್ಣನ ಸಮಾನ. ಪಾರ್ಟಿ ತಾಯಿ ಸಮಾನ ಎಂದು ಹೇಳಿದರು.
ಕಾಂಗ್ರೆಸ್‌ನವರು ಹಳ್ಳಿಗಳಲ್ಲಿ ಬೋಗಸ್ ಕಾರ್ಡ್‌ಗಳನ್ನು ಹಂಚುತ್ತಿದ್ದಾರೆ. 1947ರಿಂದ ದೇಶ, ರಾಜ್ಯ ಆಳಿದವರು ಮನೆ ಬಾಗಿಲಿಗೆ ಯಾಕೆ 2 ಸಾವಿರ ರೂ, ಉಚಿತ ವಿದ್ಯುತ್ ಕೊಡಲಿಲ್ಲ ಎಂದು ಪ್ರಶ್ನಿಸಿದರು. ಯಡಿಯೂರಪ್ಪನವರು ಸೇವಾಲಾಲ್, ವಾಲ್ಮೀಕಿ, ಕನಕ ಜಯಂತಿಗೆ ರಜೆ ಘೋಷಿಸಿದರು. ಬೊಮ್ಮಾಯಿ ಅವರು ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಳ ಮಾಡಿದರು ಎಂದರು.
ಹೊನ್ನಾಳಿ - ನ್ಯಾಮತಿ ವಿಧಾನಸಭಾ ಕ್ಷೇತ್ರದಿಂದ 25ರಿಂದ 30 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ತೇನೆ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಂಬಬೇಡಿ. ಬಿಜೆಪಿ ಬೆಂಬಲಿಸಿ. ಅಭಿವೃದ್ಧಿ ಬೇಕಿದ್ದರೆ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ರೇಣುಕಾಚಾರ್ಯ ಹೇಳಿದರು.
ಹಾಗೆಯೇ ಹೊನ್ನಾಳಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಬೇಗನೇ ಮಾತು ಮುಗಿಸುವಂತೆ ಸೂಚಿಸಿದರು. ಆದರೂ ಮಾತು ಮುಂದುವರಿಸಿದ ರೇಣುಕಾಚಾರ್ಯರಿಗೆ ಯಡಿಯೂರಪ್ಪರ ಸೂಚನೆ ಬಂದ ಬಳಿಕ ಮಾತು ನಿಲ್ಲಿಸಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications