ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಿಂದ ಬರುವವರ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿ ಸೂಚನೆ

|
Google Oneindia Kannada News

ದಾವಣಗೆರೆ, ಜುಲೈ 9: ಬೆಂಗಳೂರಿನಲ್ಲಿ ಒಂದು ದಿನಕ್ಕೆ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ಬೆಂಗಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಬರುವವರ ಬಗ್ಗೆ ಆತಂಕ ಹೆಚ್ಚಾಗಿದೆ.

Recommended Video

WHO ಹಾಡಿ ಹೊಗಳಿದ ಚೀನಾ | Oneindia Kannada

ಬೆಂಗಳೂರು ಹಾಗೂ ಹೊರ ರಾಜ್ಯದಿಂದ ದಾವಣಗೆರೆಗೆ ಬರುವ ವ್ಯಕ್ತಿಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಕೆಲವು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಕೊರೊನಾ ವೈರಸ್‌: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಕೊರೊನಾ ವೈರಸ್‌: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು ಹಾಗೂ ಹೊರ ರಾಜ್ಯದ ವ್ಯಕ್ತಿಗಳ ಬಗ್ಗೆ ಹಳ್ಳಿಗಳಲ್ಲಿ ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ. ಈ ರೀತಿ ಬೇರೆ ಕಡೆಯಿಂದ ಬಂದ ವ್ಯಕ್ತಿಗಳಲ್ಲಿ ರೋಗ ಲಕ್ಷಣ ಕಂಡು ಬಂದರೆ, ಕೂಡಲೇ ತಾಲೂಕು ಆಸ್ಪತ್ರೆಗಳಿಗೆ ಮಾಹಿತಿ ನೀಡಿ ಎಂದಿದ್ದಾರೆ.

Take Precautionary Measures Against Outside People coming to Davanagere: DC

ಈ ಬಗ್ಗೆ ಪ್ರತಿಯೊಂದು ಹಳ್ಳಿಯಲ್ಲಿ ಡಂಗುರ ಸಾರಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ. ದಾವಣಗೆರೆಗೆ ಬೆಂಗಳೂರು ಹಾಗೂ ಹೊರ ರಾಜ್ಯದ ವ್ಯಕ್ತಿಗಳ ಬಂದರೆ, ಅವರಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ, ತಾಲೂಕು ಆಸ್ಪತ್ರೆಗಳಿಗೆ ತಿಳಿಸಬೇಕಿದೆ.

ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಸಾಕಷ್ಟು ಮಂದಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನಿಂದ ಬರುವವರಿಗೆ ಸೋಂಕಿನ ಲಕ್ಷಣಗಳು ಇದ್ದರೆ, ಜಿಲ್ಲೆಯಲ್ಲಿ ಮತ್ತಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲಾ ತಹಶಿಲ್ದಾರ್ ಗಳಿಗೆ ಪತ್ರದ ಮೂಲಕ ಡಿಸಿ ಬೀಳಗಿ ಸೂಚನೆ ನೀಡಿದ್ದಾರೆ.

English summary
DC mahantesh bilagi instructed to take precautionary measures against people coming from bengaluru and other states to davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X