ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

By ದಾವಣಗೆರೆ ಸುದ್ದಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 13: ಗಂಡ ಹೆಂಡತಿ ಇಬ್ಬರೂ ವೃತ್ತಿಯಲ್ಲಿ ಹೈಸ್ಕೂಲ್ ಶಿಕ್ಷಕರು. ಇಬ್ಬರು ಮಕ್ಕಳೊಂದಿಗೆ ಸುಖಸಂಸಾರ ನಡೆಸುತ್ತಿದ್ದರು. ಆದರೆ ಮನೆ ಕಟ್ಟುವ ವಿಚಾರದಲ್ಲಿ ಆರಂಭವಾದ ಸಣ್ಣ ಜಗಳ ಕುಟುಂಬದ ಮೂರು ಜೀವಗಳನ್ನೇ ತೆಗೆದಿದೆ.

ದಾವಣಗೆರೆ ನಗರದ ಜಯನಗರ ನಿವಾಸಿ ಶ್ರೀದೇವಿ ವೃತ್ತಿಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿದ್ದರು. ಶ್ರೀದೇವಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೈಲಿಗೆ ಹೋಗುವ ಭಯದಿಂದ ಆತ್ಮಹತ್ಯೆಗೆ ಶರಣಾದ ಯುವಕಜೈಲಿಗೆ ಹೋಗುವ ಭಯದಿಂದ ಆತ್ಮಹತ್ಯೆಗೆ ಶರಣಾದ ಯುವಕ

ಶ್ರೀದೇವಿ (38), ಮಕ್ಕಳಾದ ಹಂಸಿಕಾ (12) ಹಾಗೂ ನೂತನ್‌ (9) ಮೃತಪಟ್ಟವರು. ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ‌ನಗರದ ಹೊರವಲಯದ ಎಚ್. ಕಲ್ಪನಹಳ್ಳಿಯ ಕಾಲುವೆ ಬಳಿಗೆ ಸ್ಕೂಟಿಯಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ವೇಲ್‌ನಿಂದ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Davanagere: Teacher Committs Suicide With Her Two Children

Recommended Video

Sriramulu ಹಾಗು Sudhakar ಇಂದು ಮಾಧ್ಯಮದವರೊಂದಿಗೆ ಹೇಳಿದ್ದೇನು | Oneindia Kannada

ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

English summary
High school teacher Sridevi committed suicide by jumping into the canal with her two children in davanagere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X