ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಾಲಯ ತೆರವು ಘಟನೆ ಮತ್ತೆ ಮರುಕಳಿಸಲ್ಲ: ಬೊಮ್ಮಾಯಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಸೆಪ್ಟೆಂಬರ್ 19; "ಜನರು ಮೆಚ್ಚುವ ರೀತಿ ಆಡಳಿತ ನೀಡುತ್ತೇವೆ. ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಮೈಸೂರಿನಲ್ಲಿ ದೇಗುಲ ತೆರವು ಮಾಡಿದ್ದು ಭಕ್ತರಲ್ಲಿ ಘಾಸಿ ಉಂಟಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು. ಇಂಥ ಅಚಾತುರ್ಯ ಆಗದಂತೆ ನೋಡಿಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಭಾನುವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಮೈಸೂರಿನಲ್ಲಿ ನಡೆದ ದೇಗುಲಗಳ ತೆರವು ಅಚಾತುರ್ಯ ಘಟನೆ. ಶಾಂತಿ ಕದಡುವ ವಿಚಾರಗಳಿಗೆ ಪೂರ್ಣ ವಿರಾಮ ಹಾಡುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.

ಮುಂಬರುವ ಚುನಾವಣೆಗಳು ನಮಗೆ ಅಗ್ನಿಪರೀಕ್ಷೆ; ಯಡಿಯೂರಪ್ಪ ಮುಂಬರುವ ಚುನಾವಣೆಗಳು ನಮಗೆ ಅಗ್ನಿಪರೀಕ್ಷೆ; ಯಡಿಯೂರಪ್ಪ

"ಅಧಿಕಾರಿಗಳಿಗೂ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಇಂಥ ಅಚಾತುರ್ಯ ಮತ್ತೆ ಆಗಬಾರದು ಎಂದು. ಈಗ ನೊಂದುಕೊಂಡಿರುವ ಹಾಗೂ ಬೇಸರದಲ್ಲಿ ಇರುವವರಿಗೆ ಸಮಾಧಾನ ತರುವ ರೀತಿಯ ನಿರ್ಧಾರ ಮಾಡಲಾಗುತ್ತದೆ. ಈ ಘಟನೆ ಬಗ್ಗೆ ಈಗಾಗಲೇ ಕಾನೂನು ಪಂಡಿತರು, ಪಕ್ಷದ ಹಿರಿಯರು, ಸಂಘದ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದೇನೆ. ಯಾರೂ ಆತಂಕಪಡಬೇಕಿಲ್ಲ.‌ ಕಾನೂನಾತ್ಮಕವಾಗಿಯೂ ರಕ್ಷಣೆ ನೀಡುತ್ತೇವೆ. ಮತ್ತೆ ಈ ರೀತಿ ಆಗುವುದಿಲ್ಲ, ನಿಮ್ಮೆಲ್ಲರಿಗೂ ಒಪ್ಪಿಗೆ ಆಗುವ ರೀತಿಯಲ್ಲೇ ಎಲ್ಲವೂ ಇರಲಿದೆ" ಎಂದರು.

ದೇವಾಲಯ ತೆರವು; ಅಧಿಕಾರಿಗಳ ವಿರುದ್ಧ ಮತ್ತೆ ಪ್ರತಾಪ್ ಸಿಂಹ ಗುಡುಗು ದೇವಾಲಯ ತೆರವು; ಅಧಿಕಾರಿಗಳ ವಿರುದ್ಧ ಮತ್ತೆ ಪ್ರತಾಪ್ ಸಿಂಹ ಗುಡುಗು

Temple Demolish Incident Doesnt Happen Again Says Basavaraj Bommai

"ನಿಮ್ಮ ಸಹಕಾರ ಇರಲಿ, ಸಹನೆಯಿಂದ ಇರಿ. ನಿಮ್ಮ ಮನಸ್ಸಿಗೆ ಮುಟ್ಟುವ ಹಾಗೆ ಕೆಲಸ ಮಾಡುತ್ತೇವೆ. ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ವಿಧಾನ ಪರಿಷತ್, ಬಿಬಿಎಂಪಿ ಹಾಗೂ ಎರಡು ಉಪಚುನಾವಣೆಗಳಲ್ಲಿ ಗೆಲ್ಲಲು ರಣತಂತ್ರ ರೂಪಿಸಲಾಗುವುದು. ಈಗಾಗಲೇ ಈ ಬಗ್ಗೆ ಯಾವ ರೀತಿ ನಡೆಯಬೇಕೆಂಬ ಬಗ್ಗೆ ಸಮಾಲೋಚನೆ, ಚರ್ಚೆ ಮಾಡಲಾಗುತ್ತಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

 ದೇವಾಲಯ ಧ್ವಂಸ ಪ್ರಕರಣ: ಮೈಸೂರು ಜಿಲ್ಲಾಡಳಿತಕ್ಕೆ ಚಾಟಿ ಬೀಸಿದ ಪ್ರತಾಪ್ ಸಿಂಹ ದೇವಾಲಯ ಧ್ವಂಸ ಪ್ರಕರಣ: ಮೈಸೂರು ಜಿಲ್ಲಾಡಳಿತಕ್ಕೆ ಚಾಟಿ ಬೀಸಿದ ಪ್ರತಾಪ್ ಸಿಂಹ

"ಸೊಸೈಟಿ ಇರಲಿ, ಲೋಕಸಭೆ ಇರಲಿ ಎಲ್ಲಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೆಳಗಾವಿ, ಹುಬ್ಬಳ್ಳಿ - ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಪಟ್ಟ ಪಡೆಯುವುದು ಖಚಿತ. ಬಿಬಿಎಂಪಿಯಲ್ಲೂ ನಾವೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಖಚಿತ. ದೊಡ್ಡಬಳ್ಳಾಪುರದಲ್ಲೂ ಅಧಿಕಾರಕ್ಕೆ ಬರುತ್ತೇವೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಹಾಡಿ ಹೊಗಳಿದ ಸಿಎಂ; ಕಾರ್ಯಕಾರಿಣಿಯಲ್ಲಿಯೂ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ, "ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪರ ದಣಿವರಿಯದ ಶ್ರಮ ಕಾರಣ.‌ ಎರಡು ಬಾರಿ ಅಧಿಕಾರಕ್ಕೆ ಬರುವುದು ಅಷ್ಟು ಸುಲಭ ಅಲ್ಲ. ಜನರ ಸಮಸ್ಯೆ ತಿಳಿದು ಪರಿಹರಿಸುವ ಕೆಲಸ ಮಾಡಿದ್ದರ ಪರಿಣಾಮ ನಾವು ಅಧಿಕಾರದಲ್ಲಿದ್ದೇವೆ. ಒಬ್ಬರೇ ಇದ್ದಾಗಲೂ, ನಾಲ್ಕು ನೂರು ಜನರು ಇದ್ದಾಗಲೂ ಯಡಿಯೂರಪ್ಪ ಅವರು ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಯಡಿಯೂರಪ್ಪರ ಉತ್ತಮ ಆಡಳಿತದ ಪರಿಣಾಮ ಹಳ್ಳಿ ಹಳ್ಳಿಗಳಲ್ಲೂ ಯುವಕರು ಹಾಗೂ ರೈತರು ಬಿಜೆಪಿಯ ಪರ ಇದ್ದಾರೆ" ಎಂದು ಹೇಳಿದರು.

Recommended Video

ಪ್ಲೇ ಆಫ್ ಎಂಟ್ರಿಗೆ RCB ಎಷ್ಟು ಪಂದ್ಯ ಗೆಲ್ಬೇಕು? | Oneindia Kannada

ಕಾಂಗ್ರೆಸ್ ವಿರುದ್ಧ ವಾಗ್ದಾಳಿ; "ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ವೀಕ್ ಆಗಿದೆ. ಮಹಾತ್ಮಾ ಗಾಂಧೀಜಿ ಸಿದ್ದಾಂತವೇ ಬೇರೆ. ಆ ನಂತರ ಅಧಿಕಾರಕ್ಕೆ ಬಂದ ಗಾಂಧಿ ತತ್ವ, ಸಿದ್ಧಾಂತವೇ ಬೇರೆ ಬೇರೆ. ಇದು ತದ್ವಿರುದ್ಧವಾದ ರೀತಿಯಲ್ಲಿ ಕಾಂಗ್ರೆಸ್ ಬಳಸಿಕೊಂಡಿದೆ. ಅರವತ್ತು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಜನರ ಪರ ಕೆಲಸ ಮಾಡಿದ್ದೇ ಕಡಿಮೆ. ಕಾಂಗ್ರೆಸ್ಸೇತರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಕಿರುಕುಳ ಕೊಟ್ಟಿದೆ. ಪ್ರಾದೇಶಿಕವಾಗಿ ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ಇದು ಬಿಜೆಪಿಯಲ್ಲಿದೆ. ಹಾಗಾಗಿಯೇ ಇವತ್ತು ಎಷ್ಟೋ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿದೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

English summary
In a BJP executive committee meeting of the state unit at Davangere chief minister Basavaraj Bommai said that temple demolish incident doesn't happen again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X