Breaking; ಹೊನ್ನಾಳಿಯಲ್ಲಿ ದೇವಾಲಯದ ಗಣಮಗನ ಹತ್ಯೆ
ದಾವಣಗೆರೆ, ಮೇ 23: ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ದೇವಾಲಯದ ಗಣಮಗ.
ಹೊನ್ನಾಳಿಯ ದೊಡ್ಡಕೇರಿ ಬೀರಲಿಂಗೇಶ್ವರ ದೇವಾಲಯದ ಗಣಮಗ ಕುಮಾರಸ್ವಾಮಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಹತ್ಯೆ ನಡೆದಿದೆಯೋ ಅಥವಾ ಬೇರೆ ಕಾರಣಕ್ಕೆ ಆಗಿರಬಹುದೋ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹತ್ಯೆ ನಡೆದ ಸ್ಥಳಕ್ಕೆ ಸರ್ಕಲ್ ಇನ್ಸ್‌ಸ್ಪೆಕ್ಟರ್ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಶೀಘ್ರದಲ್ಲಿಯೇ ಬಂಧಿಸುತ್ತೇವೆ ಎಂದು ದೇವರಾಜ್ ಹೇಳಿದ್ದಾರೆ.
Recommended Video
RCB ಆಟಗಾರರು ಪಯಣ ಈಗ ಕೋಲ್ಕತಾ ಕಡೆಗೆ | #Cricket | Oneindia Kannada












Click it and Unblock the Notifications