• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ ನಗರ ದೇವತೆ ದುಗ್ಗಮ್ಮ ಜಾತ್ರೆಗೆ ಅದ್ಧೂರಿ ಚಾಲನೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಮಾರ್ಚ್ 02: ಮಧ್ಯೆ ಕರ್ನಾಟಕದ ಬೆಣ್ಣೆದೋಸೆ ನಗರಿ ದಾವಣಗೆರೆಯ ನಗರ ದೇವತೆ ದುರ್ಗಾಂಬಿಕಾ ದೇವಿ ಜಾತ್ರೆಗೆ ಇಂದಿನಿಂದ ಅಧಿಕೃತ ಚಾಲನೆ ಸಿಕ್ಕಿದ್ದು, ಬೆಳಗ್ಗೆ ದೇವಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ ಕಂಕಣಧಾರಣೆ ಮೂಲಕ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಮತ್ತು ಗೌಡರು, ಶಾಮಭೋಗರು, ರೈತರು, ಬಣಕಾರರು, ಬಾಬುದಾರರ ನೇತೃತ್ವದಲ್ಲಿ ದುಗ್ಗಮ್ಮನ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ.

ದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ

ಫೆ. 28 ರಂದು ಅಂದರ ಕಂಬದ ಪೂಜೆ ನೆರವೇರಿಸಲಾಗಿತ್ತು. ಇಂದು ಅಭಿಷೇಕದೊಂದಿಗೆ ಕಂಕಣಧಾರಣೆ ನಡೆಸಲಾಯಿತು. ಇದರೊಂದಿಗೆ ದುಗ್ಗಮ್ಮನ ಹಬ್ಬ ಎದುರು ನೋಡುತ್ತಿದ್ದ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಇಂದು ಮಧ್ಯರಾತ್ರಿ (02/03/20)ರಾತ್ರಿ ಸಾರು ಹಾಕಲಿದ್ದು, ಮಂಗಳವಾರ ಬೆಳಿಗ್ಗೆ ದಾಸೋಹ ಮಹೋಪಕರಣ ಸಮಾರಂಭ ನಡೆಯಲಿದೆ.

ಮಂಗಳವಾರ ರಾತ್ರಿ ದೇವಿಗೆ ಭಕ್ತಿ ಸಮರ್ಪಣೆ ನಡೆಯಲಿದೆ. ದೇವಿ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ 3 ಕಡೆಯಿಂದ ದೇವಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬುಧವಾರ ಬೆಳಗ್ಗೆ ದುರ್ಗಾಂಬಿಕಾದೇವಿ ಮಹಾ ಪೂಜೆ ನಡೆಯಲಿದ್ದು, ಊರಿಗೆ ಚರಗ ಚೆಲ್ಲುವ ಕಾರ್ಯ ನಡೆಯಲಿದೆ. ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳಲ್ಲಿ ವಿದ್ಯುತ್ ದೀಪ, ತೋರಣಗಳಿಂದ ಅಲಂಕಾರ ಮಾಡಲಾಗಿದೆ. 16.50 ಲಕ್ಷ ವೆಚ್ಚದಲ್ಲಿ ಮೈಸೂರು ಅರಮನೆ ಮಾದರಿಯ ಮಹಾ ಮಂಟಪ ನಿರ್ಮಾಣ ಮಾಡಲಾಗಿದೆ.

ಬೆಣ್ಣೆ ನಗರಿ ದಾವಣಗೆರೆಯಲ್ಲಿ 7 ಎಚ್ 1ಎನ್1 ಪ್ರಕರಣ ದಾಖಲು

ನಗರದ ಜನತೆ ಈಗಾಗಲೇ ಹಬ್ಬಕ್ಕೆ ಬೇಕಾದ ಸಕಲ ಸಿದ್ಧತೆ ಮಾಡಿಕೊಂಡಿದ್ದು, ದೂರದ ಊರುಗಳಿಂದ ತಮ್ಮ ತಮ್ಮ ಬಂಧು ಮಿತ್ರರನ್ನು ಕರೆಸಿಕೊಂಡಿದ್ದಾರೆ. ಜಾತ್ರೆ ಮಹೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಮುಂಜಾಗೃತ ಕ್ರಮ ಕೈಗೊಂಡಿದ್ದು, ದೇವಾಲಯದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಂಗಳವಾರ ಸಿಹಿ ಊಟ ನಡೆಯಲಿದ್ದು, ಬುಧವಾರ ಮಾಂಸಾಹಾರ ಊಟಕ್ಕೆ ನಗರದೆಲ್ಲೆಡೆ ಭರ್ಜರಿ ಸಿದ್ಧತೆ ನಡೆದಿದೆ. ದೇವಿಗೆ ಹರಕೆ ತೀರಿಸಲು ಭಕ್ತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಬ್ಬರ ಮನೆ ಮುಂದೆ ಕುರಿಗಳನ್ನು ಕಟ್ಟಿ ಹಾಕಿದ್ದಾರೆ.

ತಳವಾರ ಕೇರಿ, ಹೊಂಡದ ಸರ್ಕಲ್‌, ಗಾಂಧಿನಗರ, ಎಸ್‌ಕೆಪಿ ರಸ್ತೆ, ಶಿವಾಜಿನಗರ, ಬೂದಾಳ್‌ ರಸ್ತೆ, ಜಾಲಿನಗರ, ವಿನೋಬ ನಗರ, ದೇವರಾಜ್‌ ಅರಸ್‌ ಬಡಾವಣೆ, ನಿಟ್ಟವಳ್ಳಿ ಸೇರಿದಂತೆ ಅನೇಕ ಕಡೆ ದುರ್ಗಾದೇವಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಇಂದು ಪಂಚಾಮೃತ ಅಭಿಷೇಕ ಆಗಿರುವುದರಿಂದ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ರಾತ್ರಿ ಆಗುತ್ತಿದ್ದಂತೆ ದೇವಿ ದರ್ಶನಕ್ಕೆ ಭಕ್ತರು ಹರಿದು ಬರಲಿದ್ದಾರೆ.

English summary
The Durgambika Devi Fair is officially Start from today in Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X