ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಠ, ಮಂದಿರಗಳನ್ನು ಮುಜರಾಯಿ ಇಲಾಖೆಗೆ ಸೇರಿಸುವುದಿಲ್ಲವೆಂದ ಸಚಿವ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಫೆಬ್ರವರಿ 26: ಯಾವುದೇ ಕಾರಣಕ್ಕೂ ಮಠ-ಮಂದಿರಗಳನ್ನು ಮುಜರಾಯಿ ಇಲಾಖೆಗೆ ಸೇರಿಸುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ದಾವಣಗೆರೆಯಲ್ಲಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಪೂರ್ವಾಭಾವಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಪೂಜಾರಿಗಳ ನೇಮಕ‌ ಕುರಿತು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಪೌರಕಾರ್ಮಿಕರಿಗೆ ಪೌರಕಾರ್ಮಿಕರಿಗೆ "ಪಾಲಿಸಿ" ಉಡುಗೊರೆ ನೀಡಿದ ಪಾಲಿಕೆ ಸದಸ್ಯ

ದೇವಸ್ಥಾನಗಳಿಗೆ ಅದರದ್ದೇ ಆದ ಕಟ್ಟುಪಾಡುಗಳು, ಪರಂಪರೆ ಇರುತ್ತವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಸಾಮಾಜಿಕ‌ ನ್ಯಾಯಕ್ಕೆ ಧಕ್ಕೆ ಬಂದಾಗ ಮಾತ್ರ ಸರ್ಕಾರ ಮಧ್ಯ ಪ್ರವೇಶ ಮಾಡುತ್ತದೆ ಎಂದು ಹೇಳಿದರು.

The Minister Srinivas Poojary Said Temples Would Not Be Added To The Muzarai

ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇತರರು ದೇಶ ದ್ರೋಹದ ವಿಚಾರ ಬಂದಾಗ ಆಕ್ರೋಶದಿಂದ ಮಾತನಾಡಿದ್ದಾರೆ. ಹಿರಿಯರ ಬಗ್ಗೆ ನಮಗೆ ಗೌರವ ಇದೆ, ದೊರೆಸ್ವಾಮಿಯವರ ಬಗ್ಗೆ ಏನು ಹೇಳಿದ್ದಾರೆ ಗೊತ್ತಿಲ್ಲ ಎಂದು ತಿಳಿಸಿದರು.

English summary
Muzarayi minister Kota Srinivas Poojary react in Davanagere, the government had no intention of adding the shrines to the muzarayi department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X