ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಮುದಾಯ

ದಾವಣಗೆರೆ, ಜನವರಿ 24: ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ವಿರುದ್ಧ ಈಗ ಮುಸ್ಲಿಂ ಸಮುದಾಯ ತಿರುಗಿ ಬಿದ್ದಿದೆ.

Recommended Video

      ವಿರುದ್ಧ ತಿರುಗಿಬಿದ್ದ ಮುಸ್ಲೀಂ ಸಮುದಾಯ ಮಾಡಿದ್ದೇನು ನೋಡಿ | Renukacharya | Muslim | Oneindiakannada

      ಜನವರಿ 20 ರಂದು ದಾವಣಗೆರೆಯ ಹೊನ್ನಾಳಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನಾ ಸಮಾರಂಭದಲ್ಲಿ, ಶಾಸಕ ಎಂಪಿ ರೇಣುಕಾಚಾರ್ಯ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಮುಸ್ಲಿಂ ಸಮುದಾಯದ ಮುಖಂಡರು ಬೃಹತ್ ಪ್ರತಿಭಟನೆ‌ ನಡೆಸಲಿದ್ದಾರೆ.

      ಹೊನ್ನಾಳಿ ತಾಲ್ಲೂಕಿನ 53 ಗ್ರಾಮಗಳಲ್ಲಿನ 120 ಮಸೀದಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಧ್ಯಾಹ್ನ 3.30 ಕ್ಕೆ ಪ್ರತಿಭಟನೆ ನಡೆಸಲಿದ್ದಾರೆ. ಶುಕ್ರವಾರ ನಮಾಜ್‌ ಮುಗಿಸಿಕೊಂಡು ಸಾವಿರಾರು ಮುಸ್ಲಿಂ ಸಮುದಾಯದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

      The Muslim Community Against The Honnali MLA Renukacharya

      ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹಾಗೂ ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಣೆ ಮಾಡಿರುತ್ತಾರೆ ಎಂದು ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.

      The Muslim Community Against The Honnali MLA Renukacharya

      ರೇಣುಕಾಚಾರ್ಯ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಹೊನ್ನಾಳಿ ತಾಲ್ಲೂಕು ಆಡಳಿತಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+