ಮೇಯರ್ ಚುನಾವಣೆ: ಕಾಂಗ್ರೆಸ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದಾವಣಗೆರೆ, ಫೆಬ್ರವರಿ 20: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ನಕಲಿ ಹೆಸರು ಸೇರ್ಪಡೆಗೊಳಿಸಿರುವುದಾಗಿ ಆರೋಪಿಸಿ ಕಾಂಗ್ರೆಸ್ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯ ಮತದಾರರ ಪಟ್ಟಿಗೆ ಸಚಿವ ಆರ್.ಶಂಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಅವರ ಹೆಸರು ಸೇರ್ಪಡೆ ಪ್ರಶ್ನಿಸಿ ಪಾಲಿಕೆಯ ಕಾಂಗ್ರೆಸ್‌ನ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.
ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರ ಹಿಡಿಯುವ ಸಲುವಾಗಿ ಬಿಜೆಪಿ ಮತದಾತರ ಪಟ್ಟಿಯಲ್ಲಿ ಎಂಎಲ್ಸಿ ಗಳ ಹೆಸರನ್ನು ಅಕ್ರಮವಾಗಿ ಸೇರಿಸಲಾಗಿದೆ ಮತ್ತು ನಗರದಲ್ಲಿ ಅವರು ವಾಸಿಸುವ ನಕಲಿ ವಿಳಾಸವನ್ನು ನೀಡಲಾಗಿದೆ ಎಂದು ಆರೋಪಿಸಿ ಪಾಲಿಕೆಯ ಕಾಂಗ್ರೆಸ್ ನ ಸದಸ್ಯರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಇಂದು ಪರಿಶೀಲಿಸಿದ ಹೈಕೋರ್ಟ್ ಅದನ್ನು ವಜಾಗೊಳಿಸಿದ್ದು, ಇಬ್ಬರು ವಿಧಾನ ಪರಿಷತ್ ಸದಸ್ಯರಿಗೆ ಮತ ಹಾಕಲು ಅವಕಾಶ ನೀಡಿದೆ.

ಹೀಗಾಗಿ ದಾವಣಗೆರೆ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪಾಲಿಕೆ ಗದ್ದುಗೆ ಹಿಡಿಯಲು ಹಾದಿ ಸರಳವಾಗಲಿದೆ. ಫೆಬ್ರವರಿ 24ರಂದು ದಾವಣಗೆರೆ ನಗರ ಪಾಲಿಕೆಯ ಮೇಯರ್ ಆಯ್ಕೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಕಾನೂನು ಸಮರ ನಡೆದಿತ್ತು.












Click it and Unblock the Notifications