ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಯರ್ ಚುನಾವಣೆ: ಕಾಂಗ್ರೆಸ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಫೆಬ್ರವರಿ 20: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ನಕಲಿ ಹೆಸರು ಸೇರ್ಪಡೆಗೊಳಿಸಿರುವುದಾಗಿ ಆರೋಪಿಸಿ ಕಾಂಗ್ರೆಸ್ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯ ಮತದಾರರ ಪಟ್ಟಿಗೆ ಸಚಿವ ಆರ್.ಶಂಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಅವರ ಹೆಸರು ಸೇರ್ಪಡೆ ಪ್ರಶ್ನಿಸಿ ಪಾಲಿಕೆಯ ಕಾಂಗ್ರೆಸ್‌ನ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.

ದಾವಣಗೆರೆ ಮೇಯರ್ ಚುನಾವಣೆ: ಮೀಸಲಾತಿ ಪಟ್ಟಿ ಪ್ರಕಟದಾವಣಗೆರೆ ಮೇಯರ್ ಚುನಾವಣೆ: ಮೀಸಲಾತಿ ಪಟ್ಟಿ ಪ್ರಕಟ

ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರ ಹಿಡಿಯುವ ಸಲುವಾಗಿ ಬಿಜೆಪಿ ಮತದಾತರ ಪಟ್ಟಿಯಲ್ಲಿ ಎಂಎಲ್ಸಿ ಗಳ ಹೆಸರನ್ನು ಅಕ್ರಮವಾಗಿ ಸೇರಿಸಲಾಗಿದೆ ಮತ್ತು ನಗರದಲ್ಲಿ ಅವರು ವಾಸಿಸುವ ನಕಲಿ ವಿಳಾಸವನ್ನು ನೀಡಲಾಗಿದೆ ಎಂದು ಆರೋಪಿಸಿ ಪಾಲಿಕೆಯ ಕಾಂಗ್ರೆಸ್ ನ ಸದಸ್ಯರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಇಂದು ಪರಿಶೀಲಿಸಿದ ಹೈಕೋರ್ಟ್ ಅದನ್ನು ವಜಾಗೊಳಿಸಿದ್ದು, ಇಬ್ಬರು ವಿಧಾನ ಪರಿಷತ್ ಸದಸ್ಯರಿಗೆ ಮತ ಹಾಕಲು ಅವಕಾಶ ನೀಡಿದೆ.

Davanagere: The State High Court Dismissed The Writ Petition Filed By Congress

Recommended Video

ಮಂಗಳನ ಅಂಗಳದಲ್ಲಿ ಪರ್ಸೀವರೆನ್ಸ್ ರೋವರ್ ಇಳಿಸಿದ ಕರ್ನಾಟಕ ಮೂಲದ ವಿಜ್ಞಾನಿ | Karnataka | Oneindia Kannada

ಹೀಗಾಗಿ ದಾವಣಗೆರೆ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪಾಲಿಕೆ ಗದ್ದುಗೆ ಹಿಡಿಯಲು ಹಾದಿ ಸರಳವಾಗಲಿದೆ. ಫೆಬ್ರವರಿ 24ರಂದು ದಾವಣಗೆರೆ ನಗರ ಪಾಲಿಕೆಯ ಮೇಯರ್ ಆಯ್ಕೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಕಾನೂನು ಸಮರ ನಡೆದಿತ್ತು.

English summary
The Karnataka high court has dismissed a writ petition filed by members of Congress alleging that the fake name was included in the voter list for the Davanagere mahanagara Palike mayoral election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X