ದಾವಣಗೆರೆಯಲ್ಲಿ ಪಾನಮತ್ತ ಚಾಲಕನಿಗೆ ಟ್ರಾಫಿಕ್ ಪೊಲೀಸರಿಂದ ಥಳಿತ
Recommended Video

ಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ ಗುದ್ದಾಡಿದ ಆಟೋ ಚಾಲಕ | Oneindia Kannada
ದಾವಣಗೆರೆ, ಡಿಸೆಂಬರ್ 09 : ಪಾನಮತ್ತ ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್ ಪೊಲೀಸರು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆಟೋ ಚಾಲಕ ಗ್ರಾಹಕರ ಜತೆ ಜಗಳ ಮಾಡುತ್ತಿದ್ದನಲ್ಲದೇ, ನಡುರಸ್ತೆಯಲ್ಲಿ ಆಟೋ ನಿಲ್ಲಿಸಿ, ಅನುಚಿತವಾಗಿ ವರ್ತಿಸುತ್ತಿದ್ದ. ಆ ವೇಳೆ ಟ್ರಾಫಿಕ್ ಪೊಲೀಸರು ಆತನಿಗೆ ಬುದ್ಧಿ ಹೇಳಲು ಮುಂದಾದಾಗ ಪಾನಮತ್ತ ಚಾಲಕ ಪೊಲೀಸರನ್ನು ನಿಂದಿಸಲು ಆರಂಭಿಸಿದ.

ಆಗ ತಾಳ್ಮೆ ಕಳೆದುಕೊಂಡ ಪೊಲೀಸರು ಕುಡುಕ ಚಾಲಕನಿಗೆ ನಾಲ್ಕು ಬಾರಿಸಿದರು. ಇದಕ್ಕೆ ಉತ್ತರವಾಗಿ ಚಾಲಕನಿಗೂ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಈತನ ಹೆಸರು ಇನ್ನು ಬೆಳಕಿಗೆ ಬಂದಿಲ್ಲ. ಇಡೀ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.













Click it and Unblock the Notifications