Get Updates
Get notified of breaking news, exclusive insights, and must-see stories!

ಹರಿಹರ: ತುಂಗಾರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಸಿಎಂ ಶಿಲಾನ್ಯಾಸ: ಏನಿದು ತುಂಗಾರತಿ?

ದಾವಣಗೆರೆ, ಫೆಬ್ರವರಿ 19: ಕಾಶಿಯಲ್ಲಿ ಪ್ರತಿವರ್ಷವೂ ಗಂಗಾ ಆರತಿ ವಿಜೃಂಭಣೆಯಿಂದ ನೆರವೇರುತ್ತದೆ. ಇದನ್ನು ನೋಡಲು ಎರಡು ಕಣ್ಣುಗಳು ಸಾಲದು. ಗಂಗಾರತಿ ನೋಡಲು ದೇಶದ ಮೂಲೆಮೂಲೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಗಂಗಾರತಿ ಸೊಬಗನ್ನು ಕಣ್ತುಂಬಿಕೊಳ್ಳುತ್ತಾರೆ. ಆರತಿ ಕಾರ್ಯಕ್ರಮದಲ್ಲಿ ಬೆಳಗುವ ಜ್ಯೋತಿ ಕಂಡು ಪುಳಕಿತರಾಗುತ್ತಾರೆ. ಗಂಗಾರತಿ ಅಷ್ಟೊಂದು ಪ್ರಸಿದ್ಧಿ ಪಡೆದಿದೆ.

ಇದೇ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಹರಿದು ಹೋಗುವ ತುಂಗಾಭದ್ರಾ ನದಿಯಲ್ಲಿ ಆರತಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ 30 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಫೆಬ್ರವರಿ 20ರಂದು ಚಾಲನೆ ದೊರಕಲಿದೆ.

ಪಂಚಮಸಾಲಿ ಲಿಂಗಾಯತ ಸಮಾಜದ ಹರಿಹರ ಕ್ಷೇತ್ರದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

 ತುಂಗಾಭದ್ರಾ ಆರತಿ ಕಾರ್ಯಕ್ರಮ ಮುಂದೂಡಲಾಗಿತ್ತು

ತುಂಗಾಭದ್ರಾ ಆರತಿ ಕಾರ್ಯಕ್ರಮ ಮುಂದೂಡಲಾಗಿತ್ತು

ಕೊರೊನಾ ಹಿನ್ನೆಲೆಯಲ್ಲಿ ತುಂಗಾಭದ್ರಾ ಆರತಿ ಸಂಬಂಧ ಹಮ್ಮಿಕೊಂಡಿದ್ದ ಕಾರ್ಯಕ್ರಮ ಮುಂದೂಡಲಾಗಿತ್ತು. ಈ ಸಮಾರಂಭಕ್ಕೆ ಬರಲು ಆಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಒಪ್ಪಿದ್ದರು. ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಈಗ ಕೊರೊನಾ ಹಾಗೂ ಓಮಿಕ್ರಾನ್ ಆರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಭಾನುವಾರ (ಫೆಬ್ರವರಿ 20) ಈ ಕಾರ್ಯಕ್ರಮ ನಡೆಯಲಿದೆ.

ಕೋವಿಡ್ ಮಾರ್ಗಸೂಚಿ ಪಾಲಿಸಿ ಈ ಕಾರ್ಯಕ್ರಮ ನಡೆಸಲಾಗುವುದು. ಇಲ್ಲಿಗೆ ಬರುವ ಪ್ರತಿಯೊಬ್ಬ ಭಕ್ತರೂ ಸಹ ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಪಾಡಿಕೊಂಡು ಯಾವುದೇ ರೀತಿಯ ತೊಂದರೆ ಆಗದಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

 ದಕ್ಷಿಣ ಭಾರತದ ಹರಕ್ಷೇತ್ರ ಹರಿಹರ

ದಕ್ಷಿಣ ಭಾರತದ ಹರಕ್ಷೇತ್ರ ಹರಿಹರ

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದ ಹರಕ್ಷೇತ್ರ ಹರಿಹರದಲ್ಲಿ ನಿರ್ಮಿಸಲು ಯೋಜಿಸಿರುವ ತುಂಗಾಭದ್ರಾ ಆರತಿ ಮಂಟಪಗಳ ಉದ್ಘಾಟನಾ ಕಾರ್ಯವನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಈ ತುಂಗಭದ್ರಾ ಆರತಿ ಮಂಟಪಗಳ ನೀಲಿ ನಕ್ಷೆಯ ಬಗ್ಗೆ ಈ ಹಿಂದೆಯೇ ಹರಕ್ಷೇತ್ರ ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷ ವಚನಾನಂದ ಮಹಾಸ್ವಾಮಿಗಳು ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಮಾಹಿತಿ ನೀಡಿದ್ದರು. ಇತ್ತೀಚೆಗೆ ಕಾಶಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ತಾವು ಕಾಶಿಯಲ್ಲಿ ನೋಡಿದ ಗಂಗಾ ಆರತಿಯ ಕೆಲ ಅಂಶಗಳನ್ನು ಈ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.

 ಶನಿವಾರ ರಾತ್ರಿ ದಾವಣಗೆರೆಗೆ ಸಿಎಂ ಆಗಮನ

ಶನಿವಾರ ರಾತ್ರಿ ದಾವಣಗೆರೆಗೆ ಸಿಎಂ ಆಗಮನ

ಬಸವರಾಜ ಬೊಮ್ಮಾಯಿ ಇವರು ಫೆ.19 ಹಾಗೂ 20ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.19ರ ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಫೆ.20 ಭಾನುವಾರ ಬೆಳಗ್ಗೆ 10 ಗಂಟೆಗೆ ದಾವಣಗೆರೆಯಿಂದ ಹೊರಟು 10.20ಕ್ಕೆ ಹರಿಹರದ ಪಂಚಮಸಾಲಿ ಪೀಠದಿಂದ ಆಯೋಜಿಸಿರುವ ತುಂಗಭದ್ರಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12. 30ಕ್ಕೆ ಹರಿಹರದಿಂದ ಹೊರಟು ದಾವಣಗೆರೆಯ ಎಸ್.ಎಸ್. ಕನ್ವೆನ್ಷನ್ ಹಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3.30ಕ್ಕೆ ದಾವಣಗೆರೆಯಿಂದ ಹೊರಟು ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

 ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ

ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ

ಇನ್ನು ಹರಿಹರ ನಗರದಲ್ಲಿ ಹಾದು ಹೋಗುವ ತುಂಗಾಭದ್ರಾ ನದಿ ತೀರದಲ್ಲಿ ಸ್ವಚ್ಛತಾ ಕಾರ್ಯವನ್ನು ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಮಾಡಲಾಯಿತು. ಸಂಸದ ಜಿ.ಎಂ. ಸಿದ್ದೇಶ್ವರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತುಂಗಾಭದ್ರಾ ನದಿಯಲ್ಲಿ ಬೇಕಾಬಿಟ್ಟಿಯಾಗಿ ತ್ಯಾಜ್ಯ ಎಸೆಯುವುದರಿಂದ ಮಲೀನಗೊಂಡಿದೆ. ಈ ಹಿನ್ನೆಲೆಯಲ್ಲಿ ಕಸ ಸೇರಿದಂತೆ ತ್ಯಾಜ್ಯ ತೆಗೆಯುವ ಕಾರ್ಯವನ್ನು ನೆರವೇರಿಸಲಾಯಿತು. ಪ್ರತಿ ಭಾನುವಾರವೂ ಸಹ ಈ ಕಾರ್ಯಕ್ರಮ ನಡೆಯುತ್ತದೆ.

ಇಂದೂ ಸಹ ಬೆಳಿಗ್ಗೆಯಿಂದಲೇ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಸಂಸದ ಸಿದ್ದೇಶ್ವರ್, ಶ್ರೀಗಳ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು. ಮಲೀನಗೊಳ್ಳುವ ನದಿ ಸಂರಕ್ಷಣೆಗೆ ಮುಂದಾಗಿರುವುದು ಅತ್ಯುತ್ತಮ ಕಾರ್ಯ ಎಂದು ಬಣ್ಣಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+