ದಾವಣಗೆರೆ; ತುಂಬಿ ಹರಿದ ತುಂಗಭದ್ರೆಯಿಂದ ರೈತರಲ್ಲಿ ಸಂತಸ
ದಾವಣಗೆರೆ, ಆಗಸ್ಟ್ 06: ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾದ್ಯಂತ ವಾರದಿಂದೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ತುಂಗಾ ನದಿಗೆ 50 ಸಾವಿರ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರನ್ನು ಹರಿಬಿಡಲಾಗಿದೆ. ಹೀಗಾಗಿ ಹೊನ್ನಾಳಿ ಭಾಗದಲ್ಲಿ ತುಂಗಭದ್ರಾ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿಯುತ್ತಿದ್ದು, ನೋಡುಗರ ಕಣ್ಣಿಗೆ ಹಬ್ಬ ಉಂಟು ಮಾಡಿದೆ.
Recommended Video
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಭದ್ರಾ ನದಿಯ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೂ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಜಲಾಶಯ ನಂಬಿ ಕೃಷಿ ಮಾಡುತ್ತಿರುವ ದಾವಣಗೆರೆ ಜಿಲ್ಲೆಯ ರೈತ ಸಮೂಹದಲ್ಲಿ ಹರ್ಷ ಮೂಡಿದೆ.
ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆ ಇದೆ ಎಂಬ ಕಾರಣಕ್ಕೆ ಈಚೆಗೆ ರೈತರು ಭತ್ತ ನಾಟಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೋ ಬೇಡವೋ ಎಂಬ ದ್ವಂದ್ವದಲ್ಲಿದ್ದರು. ಆದರೀಗ, ಉತ್ತಮ ಮಳೆ ಸುರಿದು, ಜಲಾಶಯಕ್ಕೆ ಅಧಿಕ ಪ್ರಮಾಣದ ನಿರು ಹರಿದುಬರುತ್ತಿರುವ ಕಾರಣ ರೈತರು ಹರ್ಷಚಿತ್ತರಾಗಿದ್ದಾರೆ.

ಇಂದು ಭದ್ರಾ ಜಲಾಶಯಕ್ಕೆ 35,875 ಕ್ಯೂಸೆಕ್ ನಷ್ಟು ನೀರಿನ ಒಳ ಹರಿವು, 2184 ಕ್ಯೂಸೆಕ್ ನಷ್ಟು ಹೊರ ಹರಿವು ಇತ್ತು. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಷ್ಟಾಗಿದ್ದು, ಇಂದು ನೀರಿನ ಮಟ್ಟ 159.5 ಅಡಿಗಳಷ್ಟು ದಾಖಲಾಗಿದೆ. ಕಳೆದ ವರ್ಷ ಈ ದಿನದಂದು ನೀರಿನ ಮಟ್ಟ 149.11 ಇತ್ತು. ಅತ್ತ, ಹೊಸಪೇಟೆಯ ಟಿಬಿ ಡ್ಯಾಮ್ ಗೂ ನೀರಿನ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.
ಜನ-ಜಾನುವಾರುಗಳಿಗೆ ಎಚ್ಚರಿಕೆ: ತುಂಗಭದ್ರಾ ನದಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಕಾರಣಕ್ಕೆ ಹೊನ್ನಾಳಿ-ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿನ ನದಿ ದಂಡೆಗಳಲ್ಲಿ ಜನ ಓಡಾಡಬಾರದು. ಜಾನುವಾರುಗಳನ್ನು ಮೇಯಿಸುವುದಾಗಲೀ, ಇನ್ನಾವುದೇ ಚಟುವಟಿಕೆಗಳನ್ನಾಗಲೀ ಮಾಡಬಾರದು ಎಂದು ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications