ಭದ್ರಾ ಕಾಲುವೆಗೆ ಕಾರು ಪಲ್ಟಿ: ಇಬ್ಬರು ಸಾವು
ದಾವಣಗೆರೆ, ನವೆಂಬರ್ 9: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಎಂದು ಗುರುತಿಸಲಾಗಿದೆ. ಕಾರಿನಲ್ಲಿ 6 ಜನ ಮಂಗಳೂರು ಬಳಿಯ ಕೊರಗಜ್ಜನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಚಾನಲ್‌ನಲ್ಲಿ ಬಿದ್ದ ಕಾರು ಹಾಗೂ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಪುಟ್ಟ ಮಗು ಸಾವು: ಆಟೋ-ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಈ ವೇಳೆ ಪುಟ್ಟ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಲ್ಲೂಕಿನಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಓವರ್ಟೇಕ್ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿ ಹೊಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹೀಗೆ ರಾಜ್ಯದಲ್ಲಿ ಭೀಕರ ಅಪಘಾತಗಳು ಸಂಭವಿಸುತ್ತಲಿದ್ದು, ಅಪಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಪಘಾತಕ್ಕೆ ಅತೀ ವೇಗ ಕೂಡ ಒಂದು ಕಾರಣ ಎಂದು ಹೇಳಬಹುದು.












Click it and Unblock the Notifications