ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭೆ ಚುನಾವಣೆಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಸ್ಪರ್ಧೆ ಇಲ್ಲ!

|
Google Oneindia Kannada News

ಬೆಂಗಳೂರು, ಫೆಬ್ರವರಿ 04: ಲೋಕಸಭೆ ಚುನಾವಣೆಯಲ್ಲಿ ನಟ ಕಮ್ ರಾಜಕಾರಣಿ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ(UPP)ದಿಂದ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ನಟ ಉಪೇಂದ್ರ ಘೋಷಿಸಿದ್ದಾರೆ. ಆದರೆ, ಉಪೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಈ ಬಾರಿ ಉಪೆಂದ್ರ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದೇನೆ. ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕಾಗಿ ತರಬೇತಿ ವ್ಯವಸ್ಥೆ ಕೂಡ ಮಾಡಲಾಗುವುದು' ಎಂದರು.

ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರದಿಂದ ಉಪೇಂದ್ರ ಪಕ್ಷ ಸ್ಪರ್ಧೆ, ಅಭ್ಯರ್ಥಿ ಆಯ್ಕೆ ಡಿಫರೆಂಟ್‌!ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರದಿಂದ ಉಪೇಂದ್ರ ಪಕ್ಷ ಸ್ಪರ್ಧೆ, ಅಭ್ಯರ್ಥಿ ಆಯ್ಕೆ ಡಿಫರೆಂಟ್‌!

ರಾಷ್ಟ್ರ ರಾಜಕೀಯಕ್ಕಿಂತ ರಾಜ್ಯ ರಾಜಕೀಯದತ್ತ ಉಪೇಂದ್ರ ಹೆಚ್ಚಿನ ಗಮನಹರಿಸಲು ನಿರ್ಧರಿಸಿದ್ದಾರೆ. 'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಿದ್ದು, ಜಯ ಗಳಿಸಿದಲ್ಲಿ ಸಿನಿಮಾದಲ್ಲಿ ನಟನೆ ಮಾಡುವುದಿಲ್ಲ ಎಂದು ಹೇಳಿರುವುದು ಅಭಿಮಾನಿಗಳಿಗೆ ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ.

Upendra is not contesting Lok Sabha elections 2019

ರಾಜ್ಯಕ್ಕೆ ಒಂದು ಬಲಿಷ್ಠವಾದ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ಇದೇ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನಸಭೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇದೆ. ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದಲ್ಲಿ ಸಿನಿಮಾಗಳಲ್ಲಿ ನಟಿಸುವುದನ್ನು ಬಿಟ್ಟು ರಾಜಕೀಯದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಜನರಿಗೋಸ್ಕರ ಕೆಲಸ ಮಾಡುವವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಯನ್ನು ಜನರಿಗೆ ಬಿಡಲಾಗಿದೆ. ಜನಸೇವೆಯೇ ಒಂದು ಉದ್ಯೋಗವಾಗಿದ್ದು. ಜನತೆ ಅವರಿಗೆ ಸಂಬಳ ನೀಡುತ್ತಾರೆ, ಚುನಾವಣೆಯಲ್ಲಿ ನಮ್ಮ ಪಕ್ಷವು ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಮ್ಮ ವಿಚಾರ ಒಪ್ಪಿಕೊಳ್ಳುವವರಿಗೆ ಬೆಂಬಲ ಕೊಡುತ್ತೇವೆ. ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.

English summary
Actor cum politician Upendra may not contest in the upcoming Lok sabha elections 2019. However he has decided to field candidate in all 28 constituencies from his Uttarama Prajakeeta Party (UPP)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X