ಜ.12 ರಂದು ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಉಪೇಂದ್ರ ಭೇಟಿ
ದಾವಣಗೆರೆ, ಜನವರಿ 12: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ ಗ್ರಾಮಕ್ಕೆ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹಾಗೂ ಖ್ಯಾತ ಚಲನಚಿತ್ರ ನಟ ಉಪೇಂದ್ರ ಅವರು ಮಂಗಳವಾರ (ಜ.12)ರಂದು ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಲಿದ್ದಾರೆ.
ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾರಿಗನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರೇಹಳ್ಳಿ ಗ್ರಾ.ಪಂ ಕ್ಷೇತ್ರದ ಎಸ್ಸಿ ಮೀಸಲು ಕ್ಷೇತ್ರದಿಂದ ಪ್ರಜಾಕೀಯ ತತ್ವದ ಅಡಿಯಲ್ಲಿ ಅಭ್ಯರ್ಥಿ ಚೇತನ್ ಕುಮಾರ್ ಅವರು ಭರ್ಜರಿ ಗೆಲುವು ಸಾಧಿಸಿದ್ದರು.
ದಾವಣಗೆರೆ; ಸಚಿವರ ಸಿಟಿ ರೌಂಡ್ಸ್, ಅಧಿಕಾರಿಗಳ ವಿರುದ್ಧ ಗರಂ
ಹಾಗೆಯೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿ ಚೇತನ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಜಾಕೀಯ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸುವುದಾಗಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಈ ವಿಡಿಯೋ ಕುರಿತು ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಇದೀಗ ಮಂಗಳವಾರ ಅರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.