ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ವಾಲ್ಮೀಕಿ ಸಮಾಜ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 30: ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಇನ್ನೆರಡು ದಿನ‌ ಇರುವ ಬೆನ್ನಲ್ಲೇ ಸರ್ಕಾರಕ್ಕೆ ವಾಲ್ಮೀಕಿ ಸಮುದಾಯ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡುತ್ತಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಿ.ಶ್ರೀರಾಮುಲು ಅವರನ್ನು ಡಿಸಿಎಂ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಡಿಸಿಎಂ ಸ್ಥಾನ ನೀಡದೇ ಸತಾಯಿಸುತ್ತಿರುವುದು ವಾಲ್ಮೀಕಿ ಸಮುದಾಯದ ಕಂಗೆಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ.

Valmiki Community Warned Government Through Social Network

ನಾಳೆಯೆ ಸಂಪುಟ ವಿಸ್ತರಣೆ: ಕಳಪೆ ಸಾಧನೆ ಮಾಡಿರುವ ಮಂತ್ರಿಗಳಿಗೆ ಕೋಕ್?ನಾಳೆಯೆ ಸಂಪುಟ ವಿಸ್ತರಣೆ: ಕಳಪೆ ಸಾಧನೆ ಮಾಡಿರುವ ಮಂತ್ರಿಗಳಿಗೆ ಕೋಕ್?

ಅದಲ್ಲದೆ ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಂದು ಡಿಸಿಎಂ ಸ್ಥಾನ ಸೃಷ್ಟಿ ಇಲ್ಲ, ಹಾಲಿ ಇರುವ ಸ್ಥಾನಗಳಷ್ಟೇ ಎಂದು ಹೇಳಿದ್ದರಿಂದ ದಾವಣಗೆರೆಯಲ್ಲಿ ವಾಲ್ಮೀಕಿ ಸಮುದಾಯದ ಯುವಕರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸರ್ಕಾರದ ವಿರುದ್ದ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ.

Valmiki Community Warned Government Through Social Network

ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯ ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯ

ವಾಲ್ಮೀಕಿ ಸಮಾಜದ ಸಚಿವ ಬಿ.ಶ್ರೀರಾಮುಲುಗೆ ಡಿಸಿಎಂ ಸ್ಥಾನ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಬೇಕು, ವಾಲ್ಮೀಕಿ ‌ಸಮಾಜಕ್ಕೆ ಅನ್ಯಾಯವಾದರೆ ಬಿಜೆಪಿ ಸರ್ಕಾರಕ್ಕೆ ಭವಿಷ್ಯ ಇಲ್ಲ.

Valmiki Community Warned Government Through Social Network

ಓಟ್ ಹಾಕಲು ವಾಲ್ಮೀಕಿ ಸಮುದಾಯ ಬೇಕು, ಅಧಿಕಾರ ಮಾತ್ರ ನಿಮಗೆ ಬೇಕಾ ಎಂದು ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
The Valmiki community is posting posts on the social network site against the BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X