• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಾಲ್ಮೀಕಿ ಮೀಸಲಾತಿ ಬೇಡಿಕೆಯನ್ನು ಅತೀ ಶೀಘ್ರದಲ್ಲೇ ಈಡೇರಿಸುವೆ: ಸಿಎಂ ಯಡಿಯೂರಪ್ಪ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಫೆಬ್ರವರಿ 9: ವಾಲ್ಮೀಕಿ ಸಮುದಾಯದ ಮೀಸಲಾತಿ ಬೇಡಿಕೆಯನ್ನು ಅತೀ ಶೀಘ್ರವಾಗಿ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರ ಬಹುದಿನದ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಾಗಮೋಹನ್‍ದಾಸ್ ಸಮಿತಿ ರಚಿಸಿದ್ದು, ಸಮಿತಿಯ ವರದಿಯನ್ನು ಈಗಾಗಲೇ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಕುರುಬ ಸಮುದಾಯದ ಸ್ವಾಮೀಜಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರ್ಕಾರ, ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ವಾಲ್ಮೀಕಿ ಸಮುದಾಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಅವರು ಪ್ರಪಂಚದ ಚರಿತ್ರೆಯ ಧೃವತಾರೆಯಾಗಿದ್ದು, ಭಾರತೀಯ ಸಂಸ್ಕೃತಿಯಲ್ಲಿ ಅವರ ಕೊಡುಗೆ ಅಪಾರವಾದದ್ದು. ವಾಲ್ಮೀಕಿ ಗುರುಪೀಠ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಜನರ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ಆಧ್ಯಾತ್ಮಿಕ ಚಿಂತಕ, ಶಿಕ್ಷಣ ತಜ್ಞ, ರಾಜನೀತಿ ತಜ್ಞ, ತತ್ವಜ್ಞಾನಿಯಾದ ವಾಲ್ಮೀಕಿ ಜನಮಾನಸದಲ್ಲಿ ಇಂದಿಗೂ ಇದ್ದಾರೆ. ಜಗತ್ತಿಗೆ ರಾಮಾಯಣ ಕೊಟ್ಟ ಶ್ರೇಷ್ಠ ದಾರ್ಶನಿಕ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಸಾಮಾಜಿಕ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸುವ ಮೂಲಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುತ್ತಾ ಸಮಾನ ಅವಕಾಶಗಳನ್ನು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಜಲಸಂಪನ್ಮೂಲ ಸಚಿವ ಮತ್ತು ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ರಮೇಶ್ ಲ. ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಸದರಾದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ್ ಲ.ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ.ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು.

English summary
Chief Minister BS Yediyurappa promised to make a sincere effort to meet the reservation demand of the Valmiki community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X