Vande Bharat Express: ಇತ್ತೀಚೆಗಷ್ಟೇ ಆರಂಭಗೊಂಡಿದ್ದ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ, ಎಲ್ಲಿ?
ದಾವಣಗೆರೆ, ಜುಲೈ, 02: ಶನಿವಾರ (ಜುಲೈ 01) ಕಿಡಿಗೇಡಿಗಳು ವೇಗವಾಗಿ ಚಲಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲು ತೂರಿದ ಘಟನೆ ದಾವಣಗೆರೆಯ ಹರಿಹರ ರಸ್ತೆಯಲ್ಲಿರುವ ಜಿಎಂಐಟಿ ಕಾಲೇಜು ಹಿಂಭಾಗ ನಡೆದಿದೆ. ಪರಿಣಾಮ ವಂದೇ ಭಾರತ್ ರೈಲಿನ ಕಿಟಕಿ ಗಾಜು ಜಖಂಗೊಂಡಿದೆ. ಸದ್ಯ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ದಾವಣಗೆರೆ ಹೊರವಯಲದಲ್ಲಿರುವ ಜಿಎಂಐಟಿ ಕಾಲೇಜಿನ ಹಿಂಭಾಗ ಶನಿವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದು, ಇದರ ಪರಿಣಾಮ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿಯ ಗಾಜು ಜಖಂಗೊಂಡಿದೆ. ಈ ರೈಲು ಧಾರವಾಡದಿಂದ ಬೆಂಗಳೂರು ಕಡೆಗೆ ಸಂಚರಿಸುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ನೈಋತ್ಯ ರೈಲ್ವೆಯ ಅಧಿಕಾರಿಗಳು ಈ ಘಟನೆಯನ್ನು ಆರ್‌ಪಿಎಫ್ ಸಿಬ್ಬಂದಿಗೆ ವರದಿ ಮಾಡಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ. ದಾವಣಗೆರೆಯ ಜಿಎಂಐಟಿ ಕಾಲೇಜು ಬಳಿ ಘಟನೆ ನಡೆದಿದ್ದು, ಸಿ4 ಕೋಚ್‌ನ ಕಿಟಕಿಯ ಹಲಗೆಗೆ ಹಾನಿಯಾಗಿದೆ ಎಂದು ಎಸ್‌ಡಬ್ಲ್ಯೂಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಂದೇ ಭಾರತ್ ರೈಲಿಗೆ ಸಿಲುಕಿ ಹಸು ಸಾವು
ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇತ್ತೀಚೆಗಷ್ಟೇ ವಿದ್ಯುಕ್ತವಾಗಿ ಚಾಲನೆ ದೊರೆತಿತ್ತು. ಈ ರೈಲು ಧಾರವಾಡದಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದೆ. ಅಲ್ಲದೆ ಇದೇ ವಂದೇ ಭಾರತ್ ರೈಲಿಗೆ ಸಿಲುಕಿ ಧಾರವಾಡದಲ್ಲಿ ಮೊದಲ ಬಲಿಯಾದ ಘಟನೆಯೂ ನಡೆದಿತ್ತು.
ಕೆಲವು ದಿನಗಳ ಹಿಂದೆಯಷ್ಟೇ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲಿಗೆ ಹಸುವೊಂದು ಸಿಲುಕಿ ಸಾವನ್ನಪ್ಪಿದ ಘಟನೆ ಅರಸಿಕೇರೆ ವಲಯದಲ್ಲಿ ನಡೆದಿತ್ತು. ಆಹಾರ ಹುಡುಕುತ್ತ ಬಂದಿದ್ದ ಹಸು ರೈಲಿಗೆ ಸಿಲುಕಿ ಸಾವನ್ನಪ್ಪಿದೆ. ಇನ್ನು ಅಪಘಾತ ಸಂಭವಿಸುತ್ತದ್ದಂತೆಯೇ ರೈಲನ್ನು ನಿಲ್ಲಿಸಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಮೃತ ಹಸುವನ್ನು ಟ್ರಾಕ್‌ನಿಂದ ಹೊರಗೆ ಹಾಕಲಾಗಿತ್ತು.
ಹಾಗೆಯೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೂಡ ನಡೆದಿತ್ತು. ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಫಿರೋಜಾಬಾದ್ ಜಿಲ್ಲೆಯ ಜಲೇಸರ್ ಪಟ್ಟಣ ಮತ್ತು ಪೋರಾ ಗ್ರಾಮದ ನಡುವೆ ತುಂಡ್ಲಾ ಬಳಿ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ರೈಲು ಬರುವ ವೇಳೆ ವ್ಯಕ್ತಿ ಅತಿಕ್ರಮ ಪ್ರವೇಶ ಮಾಡಿದ್ದರು ಎನ್ನಲಾಗಿತ್ತು.

ಇನ್ನು ಧಾರವಾಡ- ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ 5 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ಚಾಲನೆ ನೀಡಿದ್ದರು.
ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.
ಅಲ್ಲದೆ ಕೋಚ್‌ಗೆ ಕಲ್ಲುಗಳು ತೂರಿಲ್ಲ. ಮತ್ತು ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಘಟನೆ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications