ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪರಿಂದ ವೀರಶೈವ ಸಮಾಜ ಉಳಿಯಿತು: ಶಾಮನೂರು ಶಿವಶಂಕರಪ್ಪ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

Recommended Video

ಕಾಂಗ್ರೆಸ್ ನಾಯಕನ ಈ ನಡೆ ನೋಡಿ ಸಿದ್ದರಾಮಯ್ಯ ಶಾಕ್ | Oneindia Kannada

ದಾವಣಗೆರೆ, ಸೆಪ್ಟೆಂಬರ್ 29: "ಯಡಿಯೂರಪ್ಪ ಅವರು ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ವೀರಶೈವ ಸಮಾಜ ಉಳಿಯಿತು" ಎಂದು ಹೇಳುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜವನ್ನು ದುರುಪಯೋಗ ಪಡಿಸಿಕೊಳ್ಳುವಾಗ ಯಡಿಯೂರಪ್ಪ ಅವರು ಬೆನ್ನಿಗೆ ನಿಂತಿದ್ದರು. ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರ ನಿರ್ಧಾರವೇ ನಮ್ಮ ನಿರ್ಧಾರ ಎಂದು ಹೇಳಿದ್ದರು. ಆ ಕಾರಣದಿಂದ ನಮ್ಮ ವೀರಶೈವ ಸಮಾಜ ಉಳಿಯುವಂತಾಯಿತು ಎಂದು ಹೇಳಿದ್ದಾರೆ.

ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದರಪ್ಪ ಶಾಮನೂರು ಶಿವಶಂಕರಪ್ಪನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದರಪ್ಪ ಶಾಮನೂರು ಶಿವಶಂಕರಪ್ಪ

ವೀರಶೈವ ಹಾಗೂ ಲಿಂಗಾಯತ ಎರಡೂ ಪ್ರತ್ಯೇಕ. ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಯತ್ನ ನಡೆಯಿತು. ಈ ನಿರ್ಧಾರದ ಪರವಾಗಿ ಸಿದ್ದರಾಮಯ್ಯ ಅವರು ಇದ್ದರು. ಆದರೆ ಪ್ರತ್ಯೇಕ ಧರ್ಮ ಎಂಬ ವಿಚಾರ ತೆಗೆದು, ಲಿಂಗಾಯತ ಸಮುದಾಯವನ್ನು ಒಡೆಯುವ ಪ್ರಯತ್ನ ಆಗುತ್ತಿದೆ ಎಂದು ಆರೋಪ ಕೇಳಿಬಂದಿತ್ತು.

Shamanur Shivashankarappa

ಇದೀಗ ಶಾಮನೂರು ಶಿವಶಂಕರಪ್ಪ ಅವರು ಹೇಳಿರುವ ವಿಚಾರ ಗಮನಿಸಿದರೆ, ಸಿದ್ದರಾಮಯ್ಯ ಅವರು ವೀರಶೈವ ಸಮಾಜವನ್ನು ದುರುಪಯೋಗ ಮಾಡಿಕೊಂಡರು ಎಂಬರ್ಥ ಹೊರಡುತ್ತದೆ.

"ನಾನು ಒಂದು ರೀತಿ ತಂತಿ‌ ಮೇಲೆ ನಡೆಯುತ್ತಿದ್ದೇನೆ. ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದರೆ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಹೇಗೆ ಪರಿಣಾಮ ಆಗುತ್ತದೆ ಎಂಬುದನ್ನು ಚಿಂತನೆ ಮಾಡಬೇಕಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭಮಂಟಪದ ನಿರ್ಮಾಣಕ್ಕೆ ಐವತ್ತು ಕೋಟಿ ರೂಪಾಯಿ ನೀಡಲಾಗಿದೆ. ಆದರೆ ಈಗ ರಾಜ್ಯದಲ್ಲಿ ಭೀಕರ ಪ್ರವಾಹ ಹಾಗೂ ಬರಗಾಲವಿದೆ. ಅವರ ಸಂಕಷ್ಟಕ್ಕೆ ಸ್ಪಂದಿಸುವುದು ಅನಿವಾರ್ಯ ಎಂದರು.

ಬೇರೆ ಯೋಜನೆಗಳಿಗೆ ಹಣ ನೀಡಿದರೆ ಅದು ಅಪರಾಧ ಆಗುತ್ತದೆ. ಯಾರೇ ಅನುದಾನ ಕೇಳಿದರೂ ಮುಂದಿನ ಬಜೆಟ್ ನಂತರ ನೀಡಲಾಗುವುದು ಎಂದು ಹೇಳಿದರು.

English summary
Yediyurappa saved Veerashaiva community. Congress prominent leader Shamanur Shivashankarappa praised CM Yediyurappa in Davanagere on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X