ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ಆಯ್ಕೆ

ದಾವಣಗೆರೆ, ಜನವರಿ 29: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ವೀರೇಶ್ ಹನಗವಾಡಿ ನೇಮಕಗೊಂಡಿದ್ದಾರೆ. ಬಹುನಿರೀಕ್ಷೆ ಹೊಂದಿದ್ದ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ವರಿಷ್ಠರು ಪಕ್ಷ ನಿಷ್ಠೆ ಗುರುತಿಸಿ ವೀರೇಶ್ ಹನಗವಾಡಿಯವರಿಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ದಾವಣಗೆರೆ ಅಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ಎದುರಾಗಿತ್ತು. ಆಕಾಂಕ್ಷಿಗಳು ಸಹ ಹೆಚ್ಚಾಗಿದ್ದರು ಆದರೆ ವರಿಷ್ಠರು ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ಇದೀಗ ದಾವಣಗೆರೆಗೆ ನೂತನ ಸಾರಥಿಯಾಗಿ ವೀರೇಶ್ ಹನಗವಾಡಿ ಆಯ್ಕೆಗೊಂಡಿದ್ದಾರೆ.

ಈ ವೇಳೆ ನೂತನ ಜಿಲ್ಲಾಧ್ಯಕ್ಷ ವಿರೇಶ್ ಹನಗವಾಡಿ ಮಾತನಾಡಿ, "ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಗ್ಗೆ ಸಂತಸವಾಯಿತು. ನನ್ನ ಪಕ್ಷ ನಿಷ್ಠೆಗೆ ವರಿಷ್ಠರು ಬೆಂಬಲಿಸಿದ್ದಾರೆ. ನನ್ನ ಆಯ್ಕೆಗೆ ಸಹಕರಿಸಿದ ಸಂಸದರಾದ ಜಿ.ಎಂ ಸಿದ್ದೇಶ್ವರ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಮತ್ತು ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಆಭಾರಿಯಾಗಿದ್ದೇನೆ.

Veeresh Hanagavadi Appointed As District BJP President

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಪಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡುತ್ತೇನೆ. ನಮ್ಮ ಪಕ್ಷದ ಬಗ್ಗೆ ಕೆಲವರು ಷಡ್ಯಂತರ ಮಾಡುತ್ತಿದ್ದಾರೆ. ಸಿಎಎ ಬಗ್ಗೆ ನಾಗರಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕಾರ್ಯಕರ್ತರು ಹಾಗು ಮುಖಂಡರೊಂದಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗುತ್ತೇನೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+