ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ-ಯಶವಂತಪುರ ರೈಲು 4 ದಿನ ಸ್ಥಗಿತ

|
Google Oneindia Kannada News

ದಾವಣಗೆರೆ, ನವೆಂಬರ್ 14 : ರೈಲ್ವೆ ಹಳಿ ಕಾಮಗಾರಿಯ ಹಿನ್ನಲೆಯಲ್ಲಿ ವಿಜಯಪುರ-ಯಶವಂತಪುರ ನಡುವೆ ಸಂಚಾರ ನಡೆಸುವ ರೈಲು ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿದೆ. ನೈಋತ್ಯ ರೈಲ್ವೆ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

"ನವೆಂಬರ್ 23 ರಿಂದ 26ರ ತನಕ ವಿಜಯಪುರ-ಯಶವಂತಪುರ ನಡುವೆ ಸಂಚರಿಸುವ 06541/06542 ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ" ಎಂದು ಕೊಟ್ಟೂರು ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ವಿಜಯಪುರ-ಮಂಗಳೂರು ನಡುವೆ ಹೊಸ ರೈಲು ಸೇವೆ ವಿಜಯಪುರ-ಮಂಗಳೂರು ನಡುವೆ ಹೊಸ ರೈಲು ಸೇವೆ

Vijayapura Yeshwantpur Train Service Stopped For 4 Days

ಹರಿಹರ- ದಾವಣಗೆರೆ ನಡುವೆ ಹಳಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ, ಕಾಮಗಾರಿಗೆ ಅಡ್ಡಿಯಾಗಬಾರದು ಎಂದು 4 ದಿನಗಳ ಕಾಲ ರೈಲು ಸಂಚಾರ ನಡೆಸುವುದಿಲ್ಲ. ನವೆಂಬರ್ 27ರಿಂದ ನಿಗದಿತ ವೇಳಾಪಟ್ಟಿಯಂತೆ ರೈಲು ಸಂಚಾರ ನಡೆಸಲಿದೆ ಎಂದು ಇಲಾಖೆ ಹೇಳಿದೆ.

ಹೇಗಿರಲಿದೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ?ಹೇಗಿರಲಿದೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ?

ಎಲ್‌ ಎಚ್‌ ಬಿ ಬೋಗಿ ಸೇರ್ಪಡೆ : ಮೈಸೂರು-ಅಜ್ಮೀರ್-ಮೈಸೂರು ಎಕ್ಸ್‌ಪ್ರೆಸ್, ಮೈಸೂರು-ಸಾಯಿನಗರ ಶಿರಡಿ- ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ನವೆಂಬರ್ 14ರಿಂದ ಸಾಂಪ್ರದಾಯಿಕ ರೇಕ್ ಬದಲಿಸಿ ಎಲ್‌ ಎಚ್‌ ಬಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ.

ಶಿವಮೊಗ್ಗದಿಂದ 3 ಹೊಸ ರೈಲು; ವೇಳಾಪಟ್ಟಿ, ನಿಲ್ದಾಣ ಶಿವಮೊಗ್ಗದಿಂದ 3 ಹೊಸ ರೈಲು; ವೇಳಾಪಟ್ಟಿ, ನಿಲ್ದಾಣ

ನೈಋತ್ಯ ರೈಲ್ವೆ ಗದಗ ರಸ್ತೆಯ ಹುಬ್ಬಳ್ಳಿ ರೈಲು ನಿಲ್ದಾಣದ 2ನೇ ಪ್ರವೇಶದ್ವಾರದ ಪಕ್ಕದಲ್ಲಿ ರೈಲ್ವೆ ಪರಂಪರೆಯನ್ನು ಹೇಳುವ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಿದೆ. ರೈಲ್ವೆಗೆ ಸಂಬಂಧಿಸಿದ ಹಳೆಯ ಫೋಟೋ, ಕಾಗದಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತದೆ.

English summary
Vijayapura-Yeshwantpur train service stopped form November 23 to 26 for railway track work. Rail will run from November 27 as per schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X