• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವೈರಸ್ ಸೋಂಕಿಗೆ ಹೊನ್ನಾಳಿ ಮಠಾಧೀಶ ವಿಶ್ವಾರಾಧ್ಯ ಸ್ವಾಮೀಜಿ ಸಾವು

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಜುಲೈ 15: ಮಹಾಮಾರಿ ಕೊರೊನಾ ವೈರಸ್ ಗೆ ಹೊನ್ನಾಳಿ ತಾಲ್ಲೂಕಿನ ರಾಂಪುರ ಮಠದ ಹಾಲಸ್ವಾಮಿ ಮಠದ ಸ್ವಾಮೀಜಿ ಅವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

   IPL 2020 moving to Dubai | Oneindia Kannada

   ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಂಪುರದ ಹಾಲಸ್ವಾಮಿ ಮಠದ ಹಾಲಶಂಕರ ವಿಶ್ವಾರಾಧ್ಯ ಸ್ವಾಮೀಜಿ (55) ಅವರು ಮೃತಪಟ್ಟಿದ್ದಾರೆ.

   ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿನಯ್ ಕುಮಾರ್, ರಘು ದೀಕ್ಷಿತ್ ಬೆಂಬಲ

   ಆರೋಗ್ಯ ಸಮಸ್ಯೆಯಿಂದಾಗಿ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

   ಕೋವಿಡ್ ಪಾಸಿಟಿವ್ ಜುಲೈ 9 ರ ಮಧ್ಯಾಹ್ನ ಸ್ವಾಮೀಜಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 11 ರಂದು ಸ್ವಾಮೀಜಿ ಅವರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢವಾಗಿದೆ.

   ಲಾಕ್ ಡೌನ್ ಹಿನ್ನೆಲೆ: ಬೆಂಗಳೂರಿನಿಂದ ದಾವಣಗೆರೆಗೆ ಬಂದಿರುವ ಜನರೆಷ್ಟು?

   ತೀವ್ರ ಉಸಿರಾಟದ ಸಮಸ್ಯೆಯಿಂದ ಸ್ವಾಮೀಜಿಗೆ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೋವಿಡ್ ವಾರ್ಡ್ ನಲ್ಲಿ ಸ್ವಾಮೀಜಿ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದರು. ಇಂದು ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಕೂಡಲೇ ಅವರನ್ನು ಐಸಿಯುಗೆ ಶಿಫ್ಟ್ ಮಾಡಿ, ವೆಂಟಿಲೇಷನ್ ವ್ಯವಸ್ಥೆ ಮಾಡಿದ್ದರು. ಆದರೆ ಸಂಜೆ 4.55 ರ ಹೊತ್ತಿಗೆ ಸ್ವಾಮೀಜಿ ಅವರು ಕೊನೆಯುಸಿರೆಳೆದರು.

   ಮುಳ್ಳುಗದ್ದುಗೆ ಸ್ವಾಮೀಜಿ ಎಂದೇ ಪ್ರಖ್ಯಾತಿ‌ ಹೊಂದಿದ್ದ ಇವರು ಪ್ರಖ್ಯಾತರಾಗಿದ್ದರು. ಸ್ವಾಮೀಜಿ ಅವರಿಗೆ ಉಸಿರಾಟದ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕೆ ಭಕ್ತರೇ ಅವರನ್ನು ಆಸ್ಪತ್ರೆಗೆ ಕರೆತಂದಿದ್ದರು. ಹೊನ್ನಾಳಿ ತಾಲೂಕು ರಾಂಪುರ ಮಠ ಮತ್ತು ಚನ್ನಗಿರಿ ತಾಲ್ಲೂಕು ಬಸವಾಪಟ್ಟಣದ ಗವಿಮಠದ ಪೀಠಾಧ್ಯಕ್ಷರಾಗಿದ್ದರು.

   English summary
   Swamiji of Halaswamy Math, the Rampur Monastery in Honnali taluk, has died For Coronavirus Infection today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X