ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಮನೂರು ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ ಮಾಡಿದ್ದೇಕೆ?

|
Google Oneindia Kannada News

ದಾವಣಗೆರೆ, ಡಿಸೆಂಬರ್ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ,ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ದಾವಣಗೆರೆ ನಿವಾಸಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿದ್ದು ಜನರಲ್ಲಿ ಕುತೂಹಲ ಕೆರಳಿಸಿದೆ.

ವೀರಶೈವ-ಲಿಂಗಾಯತ ಕುರಿತು ರಾಜ್ಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿದ್ದಾರೆ. ವೀರಶೈವ-ಲಿಂಗಾಯತ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದ್ದು, ವೀರಶೈವ-ಲಿಂಗಾಯತ ವಿವಾದ ಭುಗಿಲೆದ್ದ ನಂತರ ಶಾಮನೂರು ಅಸಮಾಧಾನಗೊಂಡಿದ್ದರು. ಹಾಗಾಗಿ ಸಿದ್ದರಾಮಯ್ಯ ಶಾಮನೂರು ಅವರನ್ನು ಭೇಟಿ ಮಾಡಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

Siddaramaiah and Shamanur

ವೀರಶೈವ-ಲಿಂಗಾಯತ ಬೇರೆ ಅಲ್ಲ.ಒಂದೇ ಎಂದು ವಾದಿಸುತ್ತಾ ಬಂದಿದ್ದ ಶಾಮನೂರು. ಸೋಮವಾರವೂ ಈ ವಿಚಾರವಾಗಿ ಮಾತನಾಡಿದ್ದರು. ಶಾಮನೂರು ಶಿವಶಂಕರಪ್ಪ ಅವರ ಆತಿಥ್ಯ ಪಡೆಯಲು ದಾವಣಗೆರೆಯ ಅವರ ನಿವಾಸಕ್ಕೆ ಸಿಎಂ ತೆರಳಿದ್ದರು.

ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಈಗಾಗಲೇ ಜಸ್ಟೀಸ್ ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ತದ ನಂತರ ಶುರುವಾದ ವೀರಶೈವ ಮಹಾಸಭೆಯ ತೀವ್ರ ವಿರೋಧ .ಇದರ ಹಿನ್ನೆಲೆಯಲ್ಲಿಯೇ ಶಾಮನೂರು ಅವರ ಬಳಿ ಸಿದ್ದರಾಮಯ್ಯಚರ್ಚಿಸಿದ್ದಾರೆ. ರಾಜಕೀಯ ವಲಯಗಳಲ್ಲಿ ತೀವ್ರ ಕುತೂಹಲ ಶುರುವಾಗಿದೆ.

English summary
In an interesting development, chief minister Siddaramaiah on Monday late night visited senior Veerashaiva leader and congressman Shamanur Shivashankarappa at his residence in Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X